ADVERTISEMENT

Bengaluru Potholes | 1 ಕಿ.ಮೀ.ನಲ್ಲಿ 400 ಗುಂಡಿ: ಆರ್. ಅಶೋಕ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2025, 15:55 IST
Last Updated 21 ನವೆಂಬರ್ 2025, 15:55 IST
<div class="paragraphs"><p>ಆರ್. ಅಶೋಕ</p></div>

ಆರ್. ಅಶೋಕ

   

ಬೆಂಗಳೂರು: ‘ಬಿವಿಕೆ ಅಯ್ಯಂಗಾರ್ ರಸ್ತೆಯ 1 ಕಿ.ಮೀ. ಅಂತರದಲ್ಲಿ 400 ಗುಂಡಿಗಳಿವೆ. ಗುಂಡಿ ಮುಚ್ಚಲು ಸರ್ಕಾರ ಬಿಡುಗಡೆ ಮಾಡುತ್ತಿರುವ ಹಣ ಎಲ್ಲಿ ಹೋಗುತ್ತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಪ್ರಶ್ನಿಸಿದರು.

ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ನಿಯೋಗವು ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿತು.

ADVERTISEMENT

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ, ‘ಬೆಂಗಳೂರು ಮಾತ್ರವಲ್ಲ. ಇಡೀ ರಾಜ್ಯದ ಎಲ್ಲ ಕಡೆಗಳಲ್ಲಿನ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ. ಗುಂಡಿ ಮುಚ್ಚುವ ನೆಪದಲ್ಲಿ ಜನರ ತೆರಿಗೆ ಹಣ ಲೂಟಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಮಾತೆತ್ತಿದರೆ, ‘ಹಣ ಬಿಡುಗಡೆ ಮಾಡಿದ್ದೇವೆ’ ಎನ್ನುತ್ತಾರೆ. ಹಾಗಿದ್ದಲ್ಲಿ ಆ ಹಣ ಎಲ್ಲಿಗೆ ಹೋಯಿತು. ಹೀಗೆ ಸುಳ್ಳು ಹೇಳುವುದನ್ನು ಬಿಟ್ಟು, ಗುಂಡಿಗಳನ್ನು ಮುಚ್ಚಿ. ರಸ್ತೆಗಳಿಗೆ ಡಾಂಬರು ಹಾಕಿ’ ಎಂದರು.

‘ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಬೆಂಗಳೂರಿನಲ್ಲಿ ಜನರ ಮಧ್ಯೆಯೇ ₹7 ಕೋಟಿ ದರೋಡೆ ಮಾಡಿದ್ದಾರೆ. ಎರಡೂವರೆ ವರ್ಷದಲ್ಲಿ ಇವರ ಸಾಧನೆ ಏನೂ ಇಲ್ಲ. ಬೆಂಗಳೂರನ್ನು ಗಾರ್ಬೇಜ್‌ ಸಿಟಿ, ದರೋಡೆ ನಗರ ಮಾಡಿದ್ದಷ್ಟೇ ಇವರ ಸಾಧನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಎರಡೂವರೆ ವರ್ಷದ ಅವಧಿಯಲ್ಲಿ ಸರ್ಕಾರದ ವಿರುದ್ಧ ಆರೋಪಗಳ ಕುರಿತಾದ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದರು. ಸಂಸದರಾದ ಪಿ.ಸಿ.ಮೋಹನ್‌, ಗೋವಿಂದ ಕಾರಜೋಳ ಅವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.