ADVERTISEMENT

ಬೆಂಗಳೂರು: ​​​​​​​ನ್ಯಾಷನಲ್ ಹಿಲ್‌ವ್ಯೂ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2022, 10:26 IST
Last Updated 18 ಜುಲೈ 2022, 10:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜರಾಜೇಶ್ವರಿ ನಗರದ ನ್ಯಾಷನಲ್ ಹಿಲ್‌ವ್ಯೂ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಬೆದರಿಕೆ ಬಂದಿದ್ದು, 1,500 ಮಕ್ಕಳನ್ನು ಬೇರೆಡೆ ಸ್ಥಳಾಂತರಿಸಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಇದೊಂದು ಹುಸಿ ಬೆದರಿಕೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಬೆಳಿಗ್ಗೆ 9 ಗಂಟೆ ಸುಮಾರಿಗೆ ಶಾಲಾ ಸಿಬ್ಬಂದಿ, ಇ-ಮೇಲ್ ಪರಿಶೀಲಿಸುತ್ತಿದ್ದರು. ಇದೇ ವೇಳೆ ಅಪರಿಚಿತರೊಬ್ಬರು ಕಳುಹಿಸಿದ್ದ ಇ-ಮೇಲ್ ತೆರೆದಿದ್ದರು.

'ನಿಮ್ಮ ಶಾಲೆಯಲ್ಲಿ ಬಾಂಬ್ ಇರಿಸಲಾಗಿದೆ. ಸದ್ಯದಲ್ಲೇ ಅದು ಸ್ಫೋಟ ಆಗಲಿದೆ' ಎಂದು ಬೆದರಿಕೆ ಹಾಕಲಾಗಿತ್ತು. ಆತಂಕಗೊಂಡ ಶಾಲಾ ಸಿಬ್ಬಂದಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ, ಮಕ್ಕಳನ್ನು ಬೇರೆಡೆಸ್ಥಳಾಂತರಿಸಿದರು.

ADVERTISEMENT

ಶಾಲೆಯ ಕಟ್ಟಡವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿ, ಇದೊಂದು ಹುಸಿ ಬೆದರಿಕೆ ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಶಾಲೆಗೆ ರಜೆ ನೀಡಲಾಗಿದೆ. ಪೊಲೀಸರ ಭದ್ರತೆ ಮುಂದುವರಿದಿದೆ.

'ಬಾಂಬ್ ಬೆದರಿಕೆ ಸಂಬಂಧ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.