ADVERTISEMENT

ಡಿ.ಜೆ. ಹಳ್ಳಿ ಗಲಭೆಯಲ್ಲಿ ಕಾಂಗ್ರೆಸ್‌ ಮುಖವಾಡ ಕಳಚಿದೆ: ಸಚಿವ ಡಾ.ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2020, 6:06 IST
Last Updated 14 ಆಗಸ್ಟ್ 2020, 6:06 IST
ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್‌
ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್‌   

ಬೆಂಗಳೂರು: ಡಿ.ಜೆ. ಹಳ್ಳಿ ಹಾಗೂ ಕೆ.ಜೆ. ಹಳ್ಳಿಗಳಲ್ಲಿ ನಡೆದ ಗಲಭೆಯಲ್ಲಿ ಕಾಂಗ್ರೆಸ್‌ ಮುಖವಾಡ ಕಳಚಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್‌ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, 'ಡಿಜೆಹಳ್ಳಿ, ಕೆಜೆಹಳ್ಳಿ ಗಲಭೆಯಲ್ಲಿ ಕಾಂಗ್ರೆಸ್‌ ಪಕ್ಷದ ಮುಖವಾಡ ಕಳಚಿದೆ. ಕ್ರೌರ್ಯದ ಮನಃಸ್ಥಿತಿಯ ದ್ಯೋತಕವಾಗಿ ಪುಂಡಾಟಿಕೆ ಮೆರೆದಿದ್ದ ಬಿಬಿಎಂಪಿ ಸದಸ್ಯೆ ಇರ್ಷಾದ್ ಬೇಗಂ ಪತಿ‌ ಕಲೀಂ ಪಾಷರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೀಚಕರ ಹಡೆಮುರಿಕಟ್ಟುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಕಾಂಗ್ರೆಸ್‌ನವರಿಗೆ ಈಗಲಾದ್ರೂ ಸತ್ಯದ ಅರಿವಾಯಿತೇ' ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT