ನಂದಿಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ
– ಪ್ರಜಾವಾಣಿ ಚಿತ್ರ
ನಂದಿ ಬೆಟ್ಟ (ಚಿಕ್ಕಬಳ್ಳಾಪುರ): ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದೂ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಬದಲಾಯಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಪ್ರತಿ ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ಆರಂಭ. ಇದಕ್ಕೆ ಖರ್ಚು ₹1125 ಕೋಟಿ ಖರ್ಚು. ಕಾರ್ಮಿಕರು ಎಲ್ಲಿ ಹೆಚ್ಚು ಇದ್ದಾರೊ ಅಲ್ಲಿ ವಸತಿ ಶಾಲೆ ನಿರ್ಮಾಣ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಎರಡು ವಸತಿ ತರಬೇತಿ ಕೇಂದ್ರ (IRS, IPS, IAS) ನಿರ್ಮಾಣ. ಇದಕ್ಕೆ ₹10 ಕೋಟಿ ಮೀಸಲು.
ಬೆಂಗಳೂರು ನಗರ ವಿವಿಗೆ ದಿವಂಗತ ಪ್ರಧಾನಿ ಮನಮೋಹನ್ ಸಿಂಗ್ ಹೆಸರು ನಾಮಕರಣಕ್ಕೆ ತೀರ್ಮಾನ.
ಹೊಸ ತಾಲ್ಲೂಕುಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳ ನಿರ್ಮಾಣ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.