ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್
–ಎಕ್ಸ್ (ಟ್ವಿಟರ್ ಚಿತ್ರ)
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಭರತನಾಟ್ಯ ಕಲಾವಿದೆ, ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್‌ನಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದಪ್ರಸಾದ್ ಮದುವೆ ನಡೆದಿದೆ. ಮದುವೆಗೆ ಎರಡು ಕುಟುಂಬದ ಸದಸ್ಯರು ಮತ್ತು ಅತ್ಯಾಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.
ಬುಧವಾರ ಸಂಜೆಯಿಂದಲೇ ವರಪೂಜೆ ಸೇರಿದಂತೆ ಮದುವೆ ಶಾಸ್ತ್ರಗಳು ನಡೆದಿದ್ದವು. ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರಿ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ.
ಕೇಂದ್ರ ಸಚಿವರಾದ ವಿ.ಸೋಮಣ್ಣ, ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದರಾದ ಡಾ.ಮಂಜುನಾಥ್, ಪಿ.ಸಿ.ಮೋಹನ್, ಬಿಜೆಪಿ ನಾಯಕ ಪ್ರತಾಪ ಸಿಂಹ ಸೇರಿದಂತೆ ಹಲವರು ನಾಯಕರು ನವ ಜೋಡಿಗೆ ಶುಭ ಹಾರೈಸಿದ್ದಾರೆ.
ಮಾರ್ಚ್ 9ರಂದು (ಭಾನುವಾರ) ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಅವರ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ರಾಜ್ಯ-ದೇಶದ ರಾಜಕೀಯ ಗಣ್ಯರು ಭಾಗಿಯಾಗುವ ನಿರೀಕ್ಷೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.