ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು, 64 ಮಂದಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಫ್ರಾಂಚೈಸಿ (ಎ–1), ಡಿಎನ್ ಎಂಟರ್‌ಟೈನ್‌ಮೆಂಟ್ ಸಂಸ್ಥೆ (ಈವೆಂಟ್ ಮ್ಯಾನೇಜ್‌ಮೆಂಟ್) (ಎ–2), ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಎ–3) ವಿರುದ್ಧ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ಗುರುವಾರ ಎಫ್‌ಐಆರ್ ದಾಖಲಾಗಿದೆ.
ಬಿಎನ್‌ಎಸ್ ಸೆಕ್ಷನ್‌ಗಳಾದ 105, 115(2), 118(1), 118(2), 3(5), 190, 132, 125(ಎ), 125 (ಬಿ) ಅಡಿ ಪ್ರಕರಣ ದಾಖಲಾಗಿದೆ. ಅದಕ್ಕೂ ಮುನ್ನ ಯಾರನ್ನೂ ಹೊಣೆ ಮಾಡದೇ ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ತನಿಖೆಗೆ ಮುಂದಾಗಿದ್ದರು. ಮೃತ ಕುಟುಂಬಸ್ಥರಿಂದ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ಎಫ್‌ಐಆರ್ ದಾಖಲಾಗಿದೆ.
ದುರ್ಘಟನೆಗೆ ಕಾರಣರಾದವರ ವಿರುದ್ಧ ಎಫ್‌ಐಆರ್ ದಾಖಲು ಮಾಡಬೇಕು. ಯುಡಿಆರ್ ದಾಖಲಿಸಿಕೊಂಡು ಪ್ರಕರಣವನ್ನು ಮುಚ್ಚಿ ಹಾಕುವ ತಂತ್ರ ಮಾಡಲಾಗಿದೆ ಎಂದು ಸಂಬಂಧಿಕರು ದೂರಿದ್ದರು.
ಕಾಲ್ತುಳಿತ ಘಟನೆ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ), ಸಮಾರಂಭದ ಆಯೋಜಕರಾಗಿದ್ದ ಆರ್‌ಸಿಬಿ ಫ್ರಾಂಚೈಸಿ, ವಿಜಯೋತ್ಸವದ ವೇಳೆ ಕ್ರೀಡಾಂಗಣದ ಭದ್ರತೆ ಹೊಣೆ ಹೊತ್ತಿದ್ದ ಡಿಎನ್‌ಎ ಈವೆಂಟ್ ಮ್ಯಾನೇಜ್‌ಮೆಂಟ್‌ಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ದುರಂತದ ವಿಚಾರಣಾಧಿಕಾರಿ ಆಗಿರುವ ಬೆಂಗಳೂರು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.