ADVERTISEMENT

Stampede | ನೋವು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ: ಕಣ್ಣೀರಿಟ್ಟ ಡಿಕೆಶಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜೂನ್ 2025, 10:47 IST
Last Updated 5 ಜೂನ್ 2025, 10:47 IST
<div class="paragraphs"><p>ಡಿ.ಕೆ.ಶಿವಕುಮಾರ್</p></div>

ಡಿ.ಕೆ.ಶಿವಕುಮಾರ್

   

(ಚಿತ್ರ ಕೃಪೆ: X/@DKShivakumar)

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದರು.

ADVERTISEMENT

ಈ ಕುರಿತು ಇಂದು (ಗುರುವಾರ) ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸುವಾಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.

ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ನಮ್ಮ ರಾಜ್ಯದಲ್ಲಿ ಇಂತಹ ದುರ್ಘಟನೆ ನಡೆಯುತ್ತದೆ ಎಂದು ನಾವು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಈ ದುರ್ಘಟನೆಯಿಂದ ಜೀವಹಾನಿಯಾಗಿದೆ. ಬೆಂಗಳೂರು ಹಾಗೂ ಕರ್ನಾಟಕ ರಾಜ್ಯದ ಘನತೆಗೆ ಧಕ್ಕೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮಾಡಿ ಲೋಪದೋಷ ಸರಿಪಡಿಸಲಾಗುವುದು. ಇದರಿಂದ ನಾವು ಪಾಠವನ್ನು ಕಲಿಯಬೇಕಿದೆ ಎಂದು ಹೇಳಿದ್ದಾರೆ.

ಈ ದುರ್ಘಟನೆ ನಡೆದಿರುವುದು ನಮ್ಮ ಕುಟುಂಬದಲ್ಲೇ ಎಂದು ಭಾವಿಸಿದ್ದೇವೆ. ದುರ್ಘಟನೆಯಲ್ಲಿ ಮೃತಪಟ್ಟವರು ನಮ್ಮ ಮನೆಯವರೇ ಮೃತಪಟ್ಟಿದ್ದಾರೆ ಎಂಬ ನೋವು ರಾಜ್ಯದಲ್ಲಿ ತುಂಬಿದೆ. ಈ ನೋವನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಸತ್ತವರು ನಮ್ಮ ಕುಟುಂಬದ ಸದಸ್ಯರು. ಈ ಪರಿಸ್ಥಿತಿಯಲ್ಲಿ ನಾವು ಸಂತಾಪ ಸೂಚಿಸಬೇಕು. ರಾಜಕೀಯ ಮಾಡಬಾರದು ಎಂದು ವಿನಂತಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.