ADVERTISEMENT

Bengaluru Stampede | ಹೆಣದ ಮೇಲೆ ಬಿಜೆಪಿ ರಾಜಕೀಯ: ಡಿಕೆಶಿ ಕಿಡಿ

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 23:30 IST
Last Updated 4 ಜೂನ್ 2025, 23:30 IST
<div class="paragraphs"><p>ಡಿ.ಕೆ ಶಿವಕುಮಾರ್</p></div>

ಡಿ.ಕೆ ಶಿವಕುಮಾರ್

   

- ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಹೆಣದ ಮೇಲೆ ಬಿಜೆಪಿ ರಾಜಕೀಯ ಮಾಡುತ್ತಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರಿದರು.

ADVERTISEMENT

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮುನ್ನೆಚ್ಚರಿಕೆ ಕ್ರಮವಾಗಿ ತೆರೆದ ವಾಹನ ಮೆರವಣಿಗೆಯನ್ನು ಪೊಲೀಸರು ರದ್ದುಗೊಳಿಸಿದ ನಿರ್ಧಾರವನ್ನು ಇದೇ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಈಗ ಸರ್ಕಾರದ ಮೇಲೆ ಆರೋಪ ಮಾಡುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ವಿಮಾನ ನಿಲ್ದಾಣದಿಂದಲೇ ಮೆರವಣಿಗೆ ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ, ತೆರೆದ ವಾಹನದಲ್ಲಿ ಮೆರವಣಿಗೆಗೆ ಅವಕಾಶ ನೀಡಬಾರದು ಎಂದು ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದರು. ಈ ತೀರ್ಮಾನವನ್ನು ಖಂಡಿಸಿದ್ದ ಬಿಜೆಪಿ, ಪರಮೇಶ್ವರ ಅವರನ್ನು ಅಸಮರ್ಥ ಗೃಹ ಮಂತ್ರಿ ಎಂದು ಕರೆದಿತ್ತು’ ಎಂದರು.

‘ಯಾವುದೇ ತೊಂದರೆ ಆಗಬಾರದು ಎಂಬ ಕಾರಣಕ್ಕೆ ನಾನು ವಿಮಾನ ನಿಲ್ದಾಣಕ್ಕೆ ತೆರಳಿದೆ. ವಿಧಾನಸೌಧದ ಕಾರ್ಯಕ್ರಮದ ವೇಳೆ ಕಬ್ಬನ್ ಪಾರ್ಕ್ ಗೇಟ್ ಅನ್ನು ಮುಚ್ಚಿ ಅಗತ್ಯ ಕ್ರಮ ಕೈಗೊಳ್ಳಲಾಯಿತು’ ಎಂದು ವಿವರಿಸಿದರು.

‘ಜನದಟ್ಟಣೆ ಹೆಚ್ಚಾದ ಪರಿಣಾಮ ನಾವು ಎರಡು ತಾಸುಗಳ ಕಾಲ ಮೆಟ್ರೊ ಸಂಚಾರವನ್ನು ನಿಲ್ಲಿಸಿದ್ದೆವು. ಇಷ್ಟೆಲ್ಲಾ ಮಾಡಿದರೂ ಬಿಜೆಪಿ ಇದರಲ್ಲಿ ರಾಜಕಾರಣ ಮಾಡುತ್ತಿದೆ’ ಎಂದರು.

ಗುಪ್ತಚರ ಇಲಾಖೆ ವೈಫಲ್ಯವೇ ಎಂದು ಕೇಳಿದಾಗ, ‘ಇಲ್ಲಿ ಯಾರ ಮೇಲೂ ದೂಷಣೆ ಮಾಡಲು ಆಗುವುದಿಲ್ಲ. ಈ ರೀತಿ ಏಕಾಏಕಿ, ಕುಟುಂಬ ಸಮೇತರಾಗಿ ಮಕ್ಕಳನ್ನು ಕರೆದುಕೊಂಡು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಬರುತ್ತಾರೆಂದು ಯಾರು ನಿರೀಕ್ಷೆ ಮಾಡಿದ್ದರು’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.