ಬೆಂಗಳೂರು ಕಾಲ್ತುಳಿತ
ಪಿಟಿಐ
ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ನಡೆಯಲಿರುವ ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಕಾರಣ ಮುಂದೂಡಲಾಗಿದೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ವಿಧಾನಸೌಧದ ಪೂರ್ವದ್ವಾರ ಬಳಿ ಹಮ್ಮಿಕೊಂಡಿದ್ದ ‘ಪರಿಸರ ನಡಿಗೆ’ ಜಾಥಾ ಕಾರ್ಯಕ್ರಮ ಮತ್ತು ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ವಿಶ್ವ ಪರಿಸರ ದಿನಾಚರಣೆ’ ಮತ್ತು ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.