ADVERTISEMENT

Bengaluru Tech Summit | ಒಂಬತ್ತು ಒಡಂಬಡಿಕೆಗೆ ಅಂಕಿತ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2022, 20:35 IST
Last Updated 18 ನವೆಂಬರ್ 2022, 20:35 IST

ಬೆಂಗಳೂರು: ‘ನವೋದ್ಯಮಗಳ ಬೆಳವಣಿಗೆಗೆ ಇಂಬು ನೀಡುವ ನಿಟ್ಟಿನಲ್ಲಿ ಮತ್ತಷ್ಟು ರಚನಾತ್ಮಕ ನೆರವು ನೀಡುವ ಉದ್ದೇಶದ ಬೂಸ್ಟರ್ ಕಿಟ್‌ ಉಪಕ್ರಮಕ್ಕೆ ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬೆಂಗಳೂರು ತಂತ್ರಜ್ಞಾನ ಸಮಾವೇಶದ ಕೊನೆಯ ದಿನವಾದ ಶುಕ್ರವಾರ ಚಾಲನೆ ನೀಡಿದರು.

ಒಟ್ಟು ಒಂಬತ್ತು ಸಂಸ್ಥೆಗಳ ಜತೆಗೆ ‘ಕರ್ನಾಟಕ ಇನ್ನೋವೇಶನ್‌ ಮತ್ತು ಟೆಕ್ನಾಲಜಿ ಸೊಸೈಟಿ’ (ಕಿಟ್ಸ್‌) ವ್ಯವಸ್ಥಾಪಕ ನಿರ್ದೇಶಕಿ ಮೀನಾ ನಾಗರಾಜ ಸರ್ಕಾರದ ಪರವಾಗಿ ಸಹಿ ಹಾಕಿದರು.

ಗೂಗಲ್‌, ಪೇಟಿಎಂ, ಎಚ್‌ಡಿಎಫ್‌ಸಿ, ರೇಜರ್ ಪೇ, ಮೈಕ್ರೋಸಾಫ್ಟ್‌, ಗೆಯ್ನ್, ದಯಾನಂದ ಸಾಗರ್ ಉದ್ಯಮಶೀಲತಾ ಮತ್ತು ವಾಣಿಜ್ಯ ಪರಿಪೋಷಣಾ ಕೇಂದ್ರ, ಎಡಬ್ಲ್ಯುಎಸ್‌ ಮತ್ತು ಸ್ಟ್ರಾಂಗ್‌ಹರ್ ವೆಂಚರ್ಸ್ ಜತೆ ಸಹಿ ಹಾಕಲಾಯಿತು.

ADVERTISEMENT

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, 'ಕರ್ನಾಟಕ ನವೋದ್ಯಮ ಕೋಶದಲ್ಲಿ ನೋಂದಣಿ ಮಾಡಿಕೊಂಡಿರುವ ನವೋದ್ಯಮಗಳಿಗೆ ಇನ್ನು ಮುಂದೆ ಎಚ್‌ಡಿಎಫ್‌ಸಿ, ಪೇಟಿಎಂ ಮತ್ತು ರೇಜರ್‌ಪೇ ಸಂಸ್ಥೆಗಳ ಮೂಲಕ ಬ್ಯಾಂಕಿಂಗ್‌ ಹಾಗೂ ಫಿನ್‌-ಟೆಕ್‌ ಸೇವೆಗಳು ಸಿಗಲಿವೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.