ADVERTISEMENT

ನವೆಂಬರ್‌ನಲ್ಲಿ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ: ಸಿ.ಎನ್.ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2020, 20:55 IST
Last Updated 26 ಆಗಸ್ಟ್ 2020, 20:55 IST
ಸಿ.ಎನ್.ಅಶ್ವತ್ಥನಾರಾಯಣ
ಸಿ.ಎನ್.ಅಶ್ವತ್ಥನಾರಾಯಣ   

ಬೆಂಗಳೂರು: ‘ಬೆಂಗಳೂರು ತಂತ್ರಜ್ಞಾನ ಶೃಂಗಸಭೆ’ (ಬೆಂಗಳೂರು ಟೆಕ್‌ ಸಮಿಟ್) ನವೆಂಬರ್ 19 ರಿಂದ 21ರ ವರೆಗೆ ನಡೆಯಲಿದೆ ಎಂದುಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಇದಕ್ಕೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಪ್ರತಿನಿಧಿಗಳ ಜತೆ ವರ್ಚುವಲ್‌ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶೃಂಗಸಭೆಯ ರೂಪುರೇಷೆಗಳನ್ನು ಶೀಘ್ರವೇ ಸಿದ್ಧಪಡಿಸಲಾಗುವುದು ಎಂದರು.

ರಾಜ್ಯದ ಅಭಿವೃದ್ಧಿಯಲ್ಲಿ ತಂತ್ರಜ್ಞಾನ ನಿರ್ಣಾಯಕ ಪಾತ್ರವಹಿಸಿದೆ. ಕೃಷಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಆಧುನಿಕ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ಅದು ಮತ್ತಷ್ಟು ಗಟ್ಟಿಯಾಗಬೇಕಿದೆ. ಇದಕ್ಕೆ ‘ಬೆಂಗಳೂರು ಟೆಕ್‌ ಸಮಿಟ್’‌ ದೊಡ್ಡ ಮಟ್ಟದ ಕೊಡುಗೆ ನೀಡಬೇಕು ಎಂದ ಅಶ್ವತ್ಥನಾರಾಯಣ ಹೇಳಿದರು.

ADVERTISEMENT

ಕೋವಿಡ್‌–19 ಸಂಕಷ್ಟ ಕಾಲದಲ್ಲಿ ದೇಶದಲ್ಲಿ 130 ಕೋಟಿ ಜನರನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೆಲವೇ ಸೆಕೆಂಡ್‌ಗಳಲ್ಲಿ ತಲುಪಲು ಸಾಧ್ಯವಾಯಿತು. ಅರ್ಹ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆ ಆಯಿತು. ಎಲ್ಲವೂ ವೇಗವಾಗಿ ಮತ್ತು ಪಾರದರ್ಶಕವಾಗಿ ನಡೆಯಿತು ಎಂದು ಅವರು ತಿಳಿಸಿದರು.

ತಂತ್ರಜ್ಞಾನ ಕೇವಲ ನಗರಗಳಿಗೆ ಸೀಮಿತವಾಗಿಲ್ಲ. ಹಳ್ಳಿಯ ಮೂಲೆ– ಮೂಲೆಗೂ ಅದು ತಲುಪಬೇಕಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.