ರಾಷ್ಟ್ರೀಯ ಹಸಿರು ನ್ಯಾಯಮಂಡಳಿ
ನವದೆಹಲಿ: ಬೆಂಗಳೂರಿನ ಪ್ರಸ್ತಾವಿತ ಸುರಂಗ ಮಾರ್ಗ ಯೋಜನೆಯಲ್ಲಿ ನಿಯಮಗಳ ಉಲ್ಲಂಘನೆಯಾಗಿದೆ ಎಂಬ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್‌ಜಿಟಿ) ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಹೆಬ್ಬಾಳ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ (ಉತ್ತರ –ದಕ್ಷಿಣ ಕಾರಿಡಾರ್) ಮೂರು ಪಥಗಳ ಅವಳಿ ಸುರಂಗ ರಸ್ತೆ (ಟ್ವಿನ್ ಟನಲ್) ನಿರ್ಮಾಣಕ್ಕೆ ₹17,698 ಕೋಟಿ ವೆಚ್ಚ ಮಾಡಲಾಗುತ್ತದೆ.
ಯೋಜನೆ ವಿರೋಧಿಸಿ ನ್ಯಾಯಮಂಡಳಿ ಮೊರೆ ಹೋಗಿರುವ ಬೆಂಗಳೂರು ಪ್ರಜಾವೇದಿಕೆ, ದತ್ತಾತ್ರೇಯ ದೇವರೆ ಹಾಗೂ ಕಾತ್ಯಾಯಿನಿ ಚಾಮರಾಜ್, ‘ತರಾತುರಿಯಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ. ತಾಂತ್ರಿಕ ಮೌಲ್ಯಮಾಪನ ನಡೆಸದೆಯೇ ಟೆಂಡರ್ ಕರೆಯಲಾಗಿದೆ. ಈ ಯೋಜನೆಗೆ ತಡೆ ನೀಡಬೇಕು‘ ಎಂದು ಆಗ್ರಹಿಸಿದ್ದಾರೆ.
ಬಿಬಿಎಂಪಿ, ರಾಜ್ಯ ಪರಿಸರ ಪರಿಣಾಮ ಅಧ್ಯಯನ ಪ್ರಾಧಿಕಾರ, ಬಿ–ಸ್ಮೈಲ್, ಕೇಂದ್ರ ಅರಣ್ಯ ಹಾಗೂ ಪರಿಸರ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.