ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ: ನಂದಿಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೆಸರುಗಳ ಬದಲಾವಣೆಗೆ ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಮತ್ತು ಬಾಗೇಪಲ್ಲಿ ತಾಲ್ಲೂಕು ಕೇಂದ್ರದ ಹೆಸರನ್ನು ಭಾಗ್ಯನಗರ ಎಂದು ಮರು ನಾಮಕರಣ ಮಾಡಲು ನಿರ್ಣಯಿಸಲಾಯಿತು.
48 ವಿಷಯಗಳು ಸಭೆಯಲ್ಲಿ ಚರ್ಚೆಗೆ ಒಳಪಟ್ಟಿದ್ದು ಬೆಂಗಳೂರು ವಿಭಾಗದ ಜಿಲ್ಲೆಗಳ ವಿಷಯಗಳು ಶೇ 90ರಷ್ಟಿವೆ.
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಸಚಿವ ಎಚ್. ಕೆ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ.
ಎತ್ತಿನಹೊಳೆ, ಕಾರ್ಮಿಕರ ಮಕ್ಕಳಿಗೆ ಪ್ರತಿ ಜಿಲ್ಲೆಯ ಲ್ಲಿ ವಸತಿ ಶಾಲೆ ಮತ್ತಿತರ ವಿಷಯಗಳ ಬಗ್ಗೆ ಚರ್ಚಿಸಿ ನಿರ್ಣಯಕೈಗೊಳ್ಳಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.