ADVERTISEMENT

ಬೆಂಗಳೂರಿನಲ್ಲಿ ಎಸ್‌ಐಆರ್‌ ಮುಂದೂಡಿ: ಚುನಾವಣಾ ಆಯೋಗಕ್ಕೆ ಸಂಗ್ರೇಶಿ ಪತ್ರ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2025, 15:47 IST
Last Updated 24 ಸೆಪ್ಟೆಂಬರ್ 2025, 15:47 IST
<div class="paragraphs"><p>ಜಿ ಎಸ್ ಸಂಗ್ರೇಶಿ</p></div>

ಜಿ ಎಸ್ ಸಂಗ್ರೇಶಿ

   

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಡಿ (ಜಿಬಿಎ) ರಚನೆ ಆಗಿರುವ 5 ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಹೊಸದಾಗಿ ಮತದಾರರ ಪಟ್ಟಿ ಸಿದ್ಧಪಡಿಸಬೇಕಾಗಿರುವುದರಿಂದ ಬೆಂಗಳೂರು ನಗರದಲ್ಲಿ ‘ವಿಶೇಷ ಸಮಗ್ರ ಪರಿಷ್ಕರಣೆ’ಯನ್ನು (ಎಸ್‌ಐಆರ್) ಮುಂದೂಡಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್‌. ಸಂಗ್ರೇಶಿ ಅವರು  ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ  ಜ್ಞಾನೇಶ್ ಕುಮಾರ್ ಅವರಿಗೆ ಬರೆದ ಪತ್ರದಲ್ಲಿ ಈ ಮನವಿ ಮಾಡಿದ್ದಾರೆ.

ADVERTISEMENT

ಸುಪ್ರೀಂಕೋರ್ಟ್‌ ನಿರ್ದೇಶನದ ಅನ್ವಯ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಬೇಕಾಗಿದೆ. ಇವುಗಳ ಗಡಿ ಗುರುತಿಸುವ ಪ್ರಕ್ರಿಯೆಯನ್ನು ಇದೇ ನವೆಂಬರ್‌ 1 ರೊಳಗೆ ಪೂರ್ಣಗೊಳಿಸಬೇಕಾಗಿದೆ. ಅಲ್ಲದೆ, ನ. 30 ರೊಳಗೆ ವಾರ್ಡ್ ಮೀಸಲಾತಿ ಪಟ್ಟಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಬೇಕಾಗಿದೆ. ಅಲ್ಲದೇ, ನ 1 ರೊಳಗೆ ಮತದಾರರ ಪಟ್ಟಿ ತಯಾರಿಸಬೇಕಾಗಿದೆ ಎಂದು ಸಂಗ್ರೇಶಿ ತಿಳಿಸಿದ್ದಾರೆ.

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಮತ್ತು ಮತದಾರರ ಪಟ್ಟಿಯನ್ನು ತಯಾರಿಸುವ ಜವಾಬ್ದಾರಿ ಮತ್ತು ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕಿದೆ. ಕೇಂದ್ರ ಚುನಾವಣಾ ಆಯೋಗ ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಹಮ್ಮಿಕೊಂಡಿದೆ. ಇದಕ್ಕೆ ರಾಜ್ಯ ಸರ್ಕಾರದ ಸಿಬ್ಬಂದಿಯನ್ನು ಬಳಸಿಕೊಳ್ಳಲಿದೆ. ಇದರಿಂದ ರಾಜ್ಯ ಚುನಾವಣಾ ಆಯೋಗಕ್ಕೆ ಮತದಾರರ ಪಟ್ಟಿಯನ್ನು ತಯಾರಿಸಲು ಸಮಸ್ಯೆಯಾಗುತ್ತದೆ ಎಂದು ಹೇಳಿದ್ದಾರೆ.

ಈ ಎಲ್ಲ ಕಾರಣಗಳಿಂದಾಗಿ ಬೆಂಗಳೂರು ನಗರದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಮುಂದೂಡಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.