ADVERTISEMENT

ಹುಬ್ಬಳ್ಳಿಯಲ್ಲಿ ಮುಂದಿನ ತಿಂಗಳು 'ಬಿಯಾಂಡ್ ಬೆಂಗಳೂರು'

ಕೇಂದ್ರ ಸಚಿವರಿಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2022, 12:32 IST
Last Updated 23 ಆಗಸ್ಟ್ 2022, 12:32 IST
ಸಮಾವೇಶಕ್ಕೆ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್ ಅವರನ್ನು ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಆಹ್ವಾನಿಸಿದರು. ತೋಟಗಾರಿಕಾ ಸಚಿವ ಮುನಿರತ್ನ ಚಿತ್ರದಲ್ಲಿದ್ದಾರೆ 
ಸಮಾವೇಶಕ್ಕೆ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್ ಅವರನ್ನು ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಆಹ್ವಾನಿಸಿದರು. ತೋಟಗಾರಿಕಾ ಸಚಿವ ಮುನಿರತ್ನ ಚಿತ್ರದಲ್ಲಿದ್ದಾರೆ    

ನವದೆಹಲಿ: ಹುಬ್ಬಳ್ಳಿ, ಮೈಸೂರು ಹಾಗೂ ಮಂಗಳೂರಿನಲ್ಲಿ ನಡೆಯಲಿರುವ 'ಬಿಯಾಂಡ್ ಬೆಂಗಳೂರು' ಸಮಾವೇಶಗಳಿಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹಾಗೂ ಕೌಶಲಾಭಿವೃದ್ಧಿ ಸಚಿವರಾಜೀವ್ ಚಂದ್ರಶೇಖರ್ ಅವರನ್ನು ಐಟಿ-ಬಿಟಿ ಸಚಿವ ಡಾ.ಸಿ ಎನ್. ಅಶ್ವತ್ಥನಾರಾಯಣ ಅವರು ರಾಜ್ಯ ಸರ್ಕಾರದ ಪರವಾಗಿ ಮಂಗಳವಾರ ಆಹ್ವಾನಿಸಿದರು.

ಸೆ.26ರಂದು ಹುಬ್ಬಳ್ಳಿಯಲ್ಲಿ ಮತ್ತು ಅಕ್ಟೋಬರ್ 19 ಮತ್ತು 20ರಂದು ಮೈಸೂರಿನಲ್ಲಿ 'ಬಿಯಾಂಡ್ ಬೆಂಗಳೂರು' ಟೆಕ್ ಸಮಾವೇಶ ನಡೆಯಲಿದೆ. ಇವುಗಳನ್ನು ಕ್ರಮವಾಗಿ ಪ್ರಲ್ಹಾದ ಜೋಶಿ ಮತ್ತು ರಾಜೀವ್ ಚಂದ್ರಶೇಖರ್ ಉದ್ಘಾಟಿಸಲಿದ್ದಾರೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಬೆಂಗಳೂರು ನಗರದ ಆಚೆಗೂ ವಿವಿಧ ಭಾಗಗಳಲ್ಲಿ ಕೈಗಾರಿಕೆಗಳು ನೆಲೆಯೂರುವಂತೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಭಾಗವಾಗಿ, ನವೆಂಬರ್‌ನಲ್ಲಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೂ (ಬಿಟಿಎಸ್) ಮುನ್ನ ಹುಬ್ಬಳ್ಳಿ, ಮೈಸೂರು ಮತ್ತು ಮಂಗಳೂರಿನಲ್ಲಿ 'ಬಿಯಾಂಡ್ ಬೆಂಗಳೂರು' ಸಮಾವೇಶಗಳನ್ನು ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ADVERTISEMENT

ಈ ಸಮಾವೇಶಗಳಲ್ಲಿ ಉದ್ಯಮಗಳ ಸ್ಥಾಪನೆ ಮತ್ತು ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ವಿಸ್ತೃತ ವಾಗಿ ಚರ್ಚಿಸಲಾಗುವುದು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಉದ್ಯಮಿಗಳು ಮತ್ತು ಹೂಡಿಕೆದಾರರು ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.