ADVERTISEMENT

ಜೂನ್ 3ರಿಂದ ರಾಜ್ಯ ಮಟ್ಟದ ಭಗೀರಥ ಜಯಂತಿ

​ಪ್ರಜಾವಾಣಿ ವಾರ್ತೆ
Published 25 ಮೇ 2022, 20:08 IST
Last Updated 25 ಮೇ 2022, 20:08 IST
ಪುರುಷೋತ್ತಮಾನಂದಪುರಿ ಸ್ವಾಮೀಜಿ
ಪುರುಷೋತ್ತಮಾನಂದಪುರಿ ಸ್ವಾಮೀಜಿ   

ಹೊಸದುರ್ಗ: ತಾಲ್ಲೂಕಿನ ಭಗೀರಥ ಪೀಠದಲ್ಲಿ ಜೂನ್ 3 ಮತ್ತು 4ರಂದು ಎಲ್ಲ ಸಮುದಾಯದವರನ್ನು ಒಳಗೊಂಡುಅದ್ದೂರಿಯಾಗಿ ಅಖಿಲ ಭಾರತ ಭಗೀರಥ ಜಯಂತ್ಯುತ್ಸವ, ಭಗೀರಥ ದೇವಸ್ಥಾನ ಲೋಕಾರ್ಪಣೆ ಹಾಗೂ ಉಪ್ಪಾರರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಸಮುದಾಯದ ಮುಖಂಡರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಜೂನ್ 3ರಂದು ಎಲ್ಲ ಸಂತರ ಭಾವಚಿತ್ರಗಳ ಮೆರವಣಿಗೆ ನಡೆಯಲಿದೆ. ಪ್ರತಿಭಾ ಪುರಸ್ಕಾರ, ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.ಜೂನ್ 4ರಂದು ಆಯೋಜಿಸಿರುವ ಜಯಂತಿ, ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮವನ್ನುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಎ.ನಾರಾಯಣ ಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಪಿ.ಪಾಟೀಲ್, ವಿವಿಧ ಮಠಾಧೀಶರು ಭಾಗವಹಿಸುವರು ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.