ADVERTISEMENT

ಭಾರತ್ ಬಂದ್‌: ಸಾಹಿತಿಗಳು, ಕಲಾವಿದರ ಬೆಂಬಲ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2021, 22:02 IST
Last Updated 25 ಸೆಪ್ಟೆಂಬರ್ 2021, 22:02 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸೋಮವಾರ ಕರೆ ನೀಡಿರುವ ಭಾರತ ಬಂದ್‌ಗೆ ಸಾಹಿತಿಗಳು, ಕಲಾವಿದರು ಬೆಂಬಲವ್ಯಕ್ತಪಡಿಸಿದ್ದಾರೆ.

‘ಇದು ಕೇವಲ ರೈತರ ಬೇಡಿಕೆ ಅಲ್ಲ. ಬದಲಿಗೆ ದೇಶದ ಎಲ್ಲ ಜನರ ಅನ್ನದ ಬಟ್ಟಲಿಗೆ ಕನ್ನ ಹಾಕುವ ಪ್ರಯತ್ನದ ವಿರುದ್ಧದ ಹೋರಾಟ’ ಎಂದು ಹೇಳಿದ್ದಾರೆ.

‘ಕೃಷಿ ಕಾಯ್ದೆಗಳ ಜತೆಯೇ ಎಪಿಎಂಸಿ, ವಿದ್ಯುತ್, ಕಾರ್ಮಿಕ ಕಾಯ್ದೆಗಳು, ನೂತನ ರಾಷ್ಟ್ರೀಯ ಶಿಕ್ಷಣ ನೀತಿಗಳೆಲ್ಲವೂ ಖಾಸಗಿ ಉದ್ಯಮಪತಿಗಳನ್ನು ಬಲಗೊಳಿಸಿ ಸಾಮಾನ್ಯ ಜನರನ್ನು ದುರ್ಬಲಗೊಳಿಸುವ ಭಾರತ ಸರ್ಕಾರದ ನೀತಿಯ ಸ್ಪಷ್ಟ ಉದಾಹರಣೆಗಳು. ಇನ್ನೊಂದೆಡೆ, ದುಡಿಮೆ ಮೂಲದ ಶ್ರಮಿಕ ಜನರನ್ನು ಸಂಕಷ್ಟಕ್ಕೆ ತಳ್ಳುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ಅವರು ದೂರಿದ್ದಾರೆ.‌

ADVERTISEMENT

‘ಹೀಗಾಗಿ, ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್‌ ಅನ್ನು ಬೆಂಬಲಿಸುತ್ತೇವೆ’ ಎಂದು ಎಂ.ಎಸ್. ಸತ್ಯು, ಡಾ.ಕೆ.ಮರುಳ ಸಿದ್ದಪ್ಪ, ವಿಜಯಾ, ಡಾ.ಎಸ್.ಜಿ.ಸಿದ್ದರಾಮಯ್ಯ, ಡಾ.ಪುರುಷೋತ್ತಮ ಬಿಳಿಮಲೆ, ಡಾ.ರಾಜೇಂದ್ರ ಚೆನ್ನಿ, ಡಾ.ಗಣೇಶ್ ದೇವಿ, ದೇವನೂರ ಮಹಾದೇವ, ಬೊಳುವಾರು ಮಹ್ಮದ್ ಕುಂಞಿ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಇತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.