ADVERTISEMENT

ಫಕೀರ ‘ಮೋದಿ’ ಧರಿಸುವ ಸೂಟು ಬೂಟು ಕಾಣುವುದಿಲ್ಲವೆ: ಬಿಜೆಪಿಗೆ ಗುಂಡೂರಾವ್ ಪ್ರಶ್ನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಸೆಪ್ಟೆಂಬರ್ 2022, 12:42 IST
Last Updated 10 ಸೆಪ್ಟೆಂಬರ್ 2022, 12:42 IST
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್    

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರು ಧರಿಸುವ ಟಿ –ಶರ್ಟ್ ಬಗ್ಗೆ ವ್ಯಂಗ್ಯವಾಡುವ ಬಿಜೆಪಿಗರು, ಮೋದಿಯವರ ದುಬಾರಿ ಸೂಟಿನ ಬಗ್ಗೆಯೂ ವ್ಯಂಗ್ಯವಾಡಲಿ ಎಂದು ಶಾಸಕ ದಿನೇಶ್ ಗುಂಡೂರಾವ್ ಸವಾಲು ಹಾಕಿದ್ದಾರೆ.

‘ಭಾರತವನ್ನು ಒಗ್ಗೂಡಿಸಿ ಯಾತ್ರೆ’ಯಲ್ಲಿ ಪಾಲ್ಗೊಂಡಿದ್ದ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ₹41 ಸಾವಿರ ಬೆಲೆಯ ಟಿ–ಶರ್ಟ್‌ ಧರಿಸಿದ್ದರು’ ಎಂದು ಶುಕ್ರವಾರ ಬಿಜೆಪಿ ಆರೋಪಿತ್ತು.

ಬಿಜೆಪಿ ಆರೋಪಕ್ಕೆ ಟ್ವಿಟರ್‌ನಲ್ಲಿ ತಿರುಗೇಟು ಕೊಟ್ಟಿರುವ ಗುಂಡೂರಾವ್, ‘ಸ್ವಯಂಘೋಷಿತ ಫಕೀರ ‘ಮೋದಿ’ಯವರು ಲಕ್ಷಾಂತರ ಬೆಲೆ ಬಾಳುವ ಸೂಟು ಬೂಟು ಧರಿಸುತ್ತಾರೆ. ಅದು ಬಿಜೆಪಿಗರ ಕಣ್ಣಿಗೆ ಕಾಣುವುದಿಲ್ಲವೆ. ಬಿಜೆಪಿಯವರಿಗೆ ರಾಹುಲ್ ಗಾಂಧಿಯವರ ಉಡುಗೆ ತೊಡುಗೆ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ’ ಎಂದು ಪ್ರಶ್ನಿಸಿದ್ದಾರೆ.

ADVERTISEMENT

‘ಫಕೀರ ಎಂದರೆ ಸಂತನ ಪ್ರತಿರೂಪ. ಫಕೀರ ಎಂದು ಕರೆಸಿಕೊಳ್ಳುವವರು ಆಡಂಬರ, ಐಷಾರಾಮಿ ಬದುಕು ಸಾಗಿಸಬಾರದು. ಬಿಜೆಪಿಯವರು ಮೊದಲು ಸ್ವಯಂಘೋಷಿತ ಫಕೀರ ಮೋದಿಯವರಿಗೆ ದುಬಾರಿ ಜೀವನ ತ್ಯಜಿಸಲು ಹೇಳಲಿ. ನಂತರ ರಾಹುಲ್ ಗಾಂಧಿಯವರ ಬಗ್ಗೆ ಮಾತಾಡಲಿ’ ಎಂದು ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದು ಕೊಳೆಯುತ್ತಿದೆ. ಹೀಗಿರುವಾಗ ಇನ್ನೊಬ್ಬರ ತಟ್ಟೆಯ ಚಿಂತೆ ಯಾಕೆ ಎಂದು ದಿನೇಶ್ ಗುಂಡೂರಾವ್ ತರಾಟೆಗೆ ತೆಗೆದು‌ಕೊಂಡಿದ್ದಾರೆ‌.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.