ADVERTISEMENT

ಮಲ್ಲಿಕಾರ್ಜುನ ಖರ್ಗೆ ಗಾಂಧಿ ಕುಟುಂಬದ ರಿಮೋಟ್ ಕಂಟ್ರೋಲ್ ಆಗಬಾರದು: ಜೋಶಿ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2022, 8:58 IST
Last Updated 1 ಅಕ್ಟೋಬರ್ 2022, 8:58 IST
ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ    

ಹುಬ್ಬಳ್ಳಿ:ಮಲ್ಲಿಕಾರ್ಜುನ ಖರ್ಗೆ ಅವರು ಹಿರಿಯರು. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಕುಟುಂಬ ರನ್ ಪಾರ್ಟಿ ಆಗಿದೆ. ಗಾಂಧಿ ಕುಟುಂಬದ ರಿಮೋಟ್ ಕಂಟ್ರೋಲ್ ಅಧ್ಯಕ್ಷ ಆಗಬಾರದು ಎನ್ನುವುದು ನಮ್ಮ ಆಶಯ ಎಂದುಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಪ್ರಥಮ ಬಾರಿ ಒಂದು ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ. ಕಾಂಗ್ರೆಸ್ ಕರ್ನಾಟಕದಲ್ಲಿ ಭಾರತ ಮಾತೆಯನ್ನು ಗೌರವಿಸುವವರ ಜೊತೆಗೆ ತೊಡಗಿಸಿಕೊಳ್ಳಲಿ ಎಂದು ಹೇಳಿದರು.

ದೆಹಲಿಯಿಂದಷ್ಟೇ ಅವರು ಆಡಳಿತ ನಡೆಸುತ್ತಿದ್ದರು. ಈಗ ಭಾರತ ಜೋಡೊ ಯಾತ್ರೆ ಮಾಡುತ್ತಿದ್ದಾರೆ. ಭಾರತ ಜೋಡೊ ಯಾತ್ರೆಗೆ ಯಾರ ಅಭ್ಯಂತರವೂ ಇಲ್ಲ. ಭಾರತ ತೋಡೊ ಆಗಬಾರದು. ರಾಹುಲ್ ಗಾಂಧಿ ಕರ್ನಾಟಕದಲ್ಲಿ ಭಾರತ ಮಾತೆಗೆ ಗೌರವ ಕೊಡುವವರನ್ನು ಭೇಟಿ ಆಗಲಿ ಎಂದರು.

ಹೃದಯದಿಂದ ಬಂದು ಯಾತ್ರೆಯಲ್ಲಿ ತೊಡಗಿಸಿಕೊಳ್ಳಲಿ. ಆರ್‌ಎಸ್‌ಎಸ್ ಅನ್ನು ಮೊದಲಿನಿಂದಲೂ ಟಾರ್ಗೆಟ್ ಮಾಡಲಾಗುತ್ತಿದೆ. ಆರ್‌ಎಸ್‌ಎಸ್ ದೇಶದ ಹಿತದ ಬಗ್ಗೆ ನಂಬಿಕೆ ಇಟ್ಟಿರುವ ಸಾಂಸ್ಕೃತಿಕ ಸಂಘಟನೆ ಎಂದು‌ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.