ಮಂಡ್ಯ: ಭಾರತ್ ಜೋಡೊ ಯಾತ್ರೆಯಲ್ಲಿ ಪುತ್ರ ರಾಹುಲ್ ಗಾಂಧಿ ಅವರೊಂದಿಗೆ ಗುರುವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದಿದ್ದಾರೆ.
ಹಬ್ಬದ ಬಿಡುವಿನ ಬಳಿಕ ರಾಹುಲ್ ಗಾಂಧಿ ಇಂದು ಬೆಳಿಗ್ಗೆ ಪಾಂಡವಪುರ ಸಮೀಪದ ಬೆಳ್ಳಾಳೆ ಗ್ರಾಮದ ಮೂಲಕ ಪಾದಯಾತ್ರ ಆರಂಭಿಸಿದರು.
ರಾಹುಲ್ ಗಾಂಧಿ ಮುನ್ನಡೆಸುವ ಭಾರತ್ ಜೋಡೊ ಯಾತ್ರೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ವರದಿಯಾಗಿದೆ.
ಜಕ್ಕನಹಳ್ಳಿ ಕ್ರಾಸ್‌ನಲ್ಲಿ ರಾಹುಲ್ ಅವರ ಜೊತೆಗೆ ಸೋನಿಯಾ ಗಾಂಧಿ ಅವರು ಪಾದಯಾತ್ರೆಯಲ್ಲಿ ಸೇರಿಕೊಂಡರು.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಅನಾರೋಗ್ಯದಲ್ಲೂ ಸೋನಿಯಾ ಅವರ ಉತ್ಸಾಹವು ಎಲ್ಲರಿಗೂ ಪ್ರೇರಕ ಶಕ್ತಿಯಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.