ಈಶ್ವರ ಖಂಡ್ರೆ
ಫೇಸ್‌ಬುಕ್ ಚಿತ್ರ
ಬೆಂಗಳೂರು: ‘ವನ್ಯಜೀವಿ ದಾಳಿಯ ಭೀತಿಯೊಂದಿಗೆ ನಿತ್ಯ ಬದುಕು ಸಾಗಿಸುತ್ತಿರುವ ಬೆಳಗಾವಿ ಜಿಲ್ಲೆ ಭೀಮಗಢ ವನ್ಯಜೀವಿ ಧಾಮದ ಒಳಗೆ ಇದ್ದ ತಾಳೆವಾಡಿಯ ಗವಳಿ ಗ್ರಾಮದ 27 ಕುಟುಂಬಗಳು ಸ್ವ ಇಚ್ಛೆಯಿಂದ ಸ್ಥಳಾಂತರಕ್ಕೆ ಸಮ್ಮತಿಸಿದ್ದಾರೆ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಸ್ವಯಂಪ್ರೇರಿತರಾಗಿ ಸಮಾಜದ ಮುಖ್ಯ ವಾಹಿನಿ ಸೇರಲು ಬಯಸಿ ಬಂದಿರುವ 27 ಕುಟುಂಬಗಳಿಗೆ ಮೇ 17ರಂದು ಮೊದಲ ಹಂತದಲ್ಲಿ ತಲಾ ₹10 ಲಕ್ಷ ಚೆಕ್ ವಿತರಿಸಲಾಗುವುದು. ಕುಟುಂಬಗಳು ಸ್ಥಳಾಂತರ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕ ಪ್ರತಿ ಕುಟುಂಬದ ಘಟಕಕ್ಕೆ ಉಳಿದ ₹5 ಲಕ್ಷ ಚೆಕ್ ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಕಳೆದ ಡಿಸೆಂಬರ್‌ನಲ್ಲಿ ಬೆಳಗಾವಿ ಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದ ವೇಳೆ, ಈ ಪ್ರದೇಶಕ್ಕೆ ಭೇಟಿ ನೀಡಿ ಅರಣ್ಯವಾಸಿ ಗಳೊಂದಿಗೆ ಸಂವಾದ ನಡೆಸಿದಾಗ ಸ್ವಯಂ ಪ್ರೇರಿತವಾಗಿ ಕಾಡಿನಿಂದ ಹೊರಬರುವ ಇಂಗಿತ
ವ್ಯಕ್ತಪಡಿಸಿದ್ದರು. ನಂತರ ಅವರ ಸ್ಥಳಾಂತರಕ್ಕೆ ಗ್ರಾಮಸಭೆಯಲ್ಲಿ ನಿರ್ಣಯ ಇತ್ಯಾದಿ ಪ್ರಕ್ರಿಯೆಯನ್ನು ಅರಣ್ಯ ಅಧಿಕಾರಿಗಳು ನಡೆಸಿದ್ದರು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.