ADVERTISEMENT

ಭೋವಿ ನಿಗಮ: ರಾಮಪ್ಪ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2025, 0:14 IST
Last Updated 9 ಅಕ್ಟೋಬರ್ 2025, 0:14 IST
   

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಂ. ರಾಮಪ್ಪ ಅವರನ್ನು ನೇಮಿಸಿ ಆದೇಶ ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಸೂಚಿಸಿದ್ದಾರೆ.

ಕಾಂಪೋಸ್ಟ್‌ ಅಭಿವೃದ್ಧಿ ನಿಗಮಕ್ಕೆ ಎ.ಎನ್‌. ನಟರಾಜ್‌ ಗೌಡ, ಮೈಸೂರಿನಲ್ಲಿರುವ ಮೃಗಾಲಯ ಪ್ರಾಧಿಕಾರಕ್ಕೆ ಎನ್‌. ರಂಗಸ್ವಾಮಿ, ಹುಬ್ಬಳ್ಳಿಯಲ್ಲಿರುವ ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ಬಿ. ನಾಗೇಂದ್ರಕುಮಾರ್ ಅವರನ್ನು ನೇಮಿಸಿ ಆದೇಶ ಹೊರಡಿಸಬೇಕು ಎಂದೂ ಅವರು ಸೂಚಿಸಿದ್ದಾರೆ.

ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಎಸ್‌. ರವಿಕುಮಾರ್‌ ಅವರು ಭ್ರಷ್ಟಾಚಾರದ ಆರೋಪದ ಕಾರಣಕ್ಕೆ, ತಮ್ಮ ಸ್ಥಾನಕ್ಕೆ
ರಾಜೀನಾಮೆ ನೀಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.