ಬೆಂಗಳೂರು: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡದಂತೆ ಒತ್ತಡ ಹೇರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನೇತೃತ್ವದ ನಿಯೋಗ ಮನವಿ ಸಲ್ಲಿಸಿತು.
‘ಕರ್ನಾಟಕ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ ಯಾವುದೇ ಜಾತಿಯನ್ನು ಪಟ್ಟಿಯಿಂದ ಕೈ ಬಿಡುವ ಪ್ರಸ್ತಾವನೆ ಇಲ್ಲ ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ರಾಜ್ಯ ಸರ್ಕಾರ ತಿಳಿಸಬೇಕು. ಈ ಎರಡೂ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು’ ಎಂದು ಸಿದ್ದರಾಮಯ್ಯ ಅವರಿಗೆ ನಿಯೋಗ ಮನವಿ ಮಾಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.