ADVERTISEMENT

ಮೀನುಗಾರಿಕೆ ನಡೆಸುತ್ತಿದ್ದ ದೋಣಿಯನ್ನು ಗುದ್ದಿ ಹಾನಿ ಮಾಡಿದ ದೊಡ್ಡ ಮೀನು

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2021, 5:00 IST
Last Updated 13 ಫೆಬ್ರುವರಿ 2021, 5:00 IST
ದೋಣಿಗೆ ಹಾನಿ ಮಾಡಿದ ಮೀನು
ದೋಣಿಗೆ ಹಾನಿ ಮಾಡಿದ ಮೀನು    

ಉಳ್ಳಾಲ: ಮೀನು ಡಿಕ್ಕಿ ಹೊಡೆದು ಬೋಟ್ ಹಾನಿಗೀಡಾಗಿರುವ ಘಟನೆ ಆಳಸಮುದ್ರ ಮೀನುಗಾರಿಕೆ ವೇಳೆ ನಡೆದಿದೆ.

ದೊಡ್ಡ ಗಾತ್ರದ, ಚೂಪು ಬಾಯಿ ಹೊಂದಿರುವ ತುಳುವಿನಲ್ಲಿ ‘ಮಡಲ್ ಮೀನ್’ ಎಂದು ಕರೆಯಲಾಗುವ ಮೀನು ಆಳಸಮುದ್ರ ಮೀನುಗಾರಿಕೆ ನಡೆಸುತ್ತಿದ್ದ ಬೋಟ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಚೂಪಾಗಿರುವ ಬಾಯಿ ಮುರಿದು ಮೀನಿನಲ್ಲಿ ರಕ್ತಸ್ರಾವ ಉಂಟಾಗಿದೆ.

ಆದರೆ ಮೀನು ಗುದ್ದಿದ ಪರಿಣಾಮಕ್ಕೆ ಮೀನುಗಾರಿಕಾ ದೋಣಿಗೆ ಹಾನಿಯಾಗಿದೆ. ಶುಕ್ರವಾರ ನಸುಕಿನ ಜಾವ 3.32 ರ ಹೊತ್ತಿಗೆ ತೆಗೆಯಲಾದ ವಿಡಿಯೊ ಇದೀಗ ವೈರಲ್ ಆಗಿದೆ. ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ತೆರಳಿರುವ ದೋಣಿ ಇದಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.