ಸಿದ್ದರಾಮಯ್ಯ , ಮುಖ್ಯಮಂತ್ರಿ
ಬೆಂಗಳೂರು: ‘ಬಿಹಾರದ ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.
ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಮಹಾ ಘಟಬಂಧನ್‌ಗೆ ಯಾಕೆ ಮತ ಹಾಕಿಲ್ಲ. ಇಂಡಿಯಾ ಮೈತ್ರಿಕೂಟಕ್ಕೆ ಏಕೆ ಹಿನ್ನಡೆಯಾಯಿತು ಗೊತ್ತಿಲ್ಲ. ಏನೇ ಆದರೂ ಜನರ ತೀರ್ಪನ್ನು ಒಪ್ಪಿಕೊಳ್ಳಬೇಕು. ನಾನು ಬಿಹಾರಕ್ಕೆ ಈ ಬಾರಿ ಚುನಾವಣಾ ಪ್ರಚಾರಕ್ಕೆ ಹೋಗಿರಲಿಲ್ಲ. ಎನ್‌ಡಿಎ ಏಕೆ ದೊಡ್ಡ ಬಹುಮತದಿಂದ ಗೆಲುವು ಸಾಧಿಸಿದೆ ಎನ್ನುವ ಕುರಿತು ಮಾಹಿತಿ ತಿಳಿದುಕೊಳ್ಳಲು ಪ್ರಯತ್ನಿಸುತ್ತೇನೆʼ ಎಂದು ಹೇಳಿದರು.
‘ಅಷ್ಟು ದೊಡ್ಡ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದು ನೋಡಿದರೆ ಮತ ಕಳವು ಶಂಕೆ ಇದೆ. ಅಲ್ಲಿನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದ ಬಳಿಕವಷ್ಟೇ ಪ್ರತಿಕ್ರಿಯೆ ನೀಡುವೆ’ ಎಂದಷ್ಟೇ ಹೇಳಿದರು.
ಅಹಿಂದ ಸಮುದಾಯದವರು ಕೈ ಹಿಡಿಯಲಿಲ್ಲವಲ್ಲ ಎಂಬ ಪ್ರಶ್ನೆಗೆ, ‘ಅಲ್ಲಿನ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾರು? ಅವರು ಹಿಂದುಳಿದವರು ಅಲ್ಲವೇ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.