
ಡಿ.ಕೆ.ಶಿವಕುಮಾರ್
ಬೆಂಗಳೂರು: ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮಹಾಘಟಬಂಧನ ಮೈತ್ರಿಯನ್ನು ಗೆಲ್ಲಿಸುವಂತೆ ಮತದಾರರಿಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ವಿಡಿಯೊ ಸಂದೇಶ ಹಂಚಿಕೊಂಡಿದ್ದಾರೆ.
'ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಬಿಹಾರದ ಮುಂದಿನ ಮುಖ್ಯಮಂತ್ರಿ ಮತ್ತು ರಾಹುಲ್ ಗಾಂಧಿ ಅವರನ್ನು ದೇಶದ ಮುಂದಿನ ಪ್ರಧಾನಿಯನ್ನಾಗಿ ಮಾಡಲು ಮಹಾಘಟಬಂಧನ ಮೈತ್ರಿಯನ್ನು ಬೆಂಬಲಿಸುವಂತೆ ಬಿಹಾರದ ಎಲ್ಲ ಸಹೋದರ ಸದೋದರಿಯರಲ್ಲಿ ವಿನಂತಿ ಮಾಡುತ್ತೇನೆ' ಎಂದಿದ್ದಾರೆ.
'ಅಭಿವೃದ್ಧಿ, ನ್ಯಾಯ ಹಾಗೂ ಬಲಿಷ್ಠ ಭಾರತಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ನಿಲ್ಲೋಣ' ಎಂದು ಅವರು ಕರೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.