ನವದೆಹಲಿ: ಬೈಕ್ ಟ್ಯಾಕ್ಸಿ ನಿಷೇಧದಿಂದ ಕರ್ನಾಟಕದಲ್ಲಿ ಚಾಲಕರು ಎದುರಿಸುತ್ತಿರುವ ಸಂಕಷ್ಟ ನಿವಾರಿಸಲು ಮಧ್ಯ ಪ್ರವೇಶಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.
ಟ್ಯಾಕ್ಸಿ ಸೇವೆ ಸ್ಥಗಿತದಿಂದ ರಾಜ್ಯದ ಲಕ್ಷಕ್ಕೂ ಹೆಚ್ಚು ಚಾಲಕರು ಹಾಗೂ ಕುಟುಂಬ ಸದಸ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸಂಬಂಧ ಸಮರ್ಪಕ ನೀತಿ ರೂಪಿಸಬೇಕು. ನೀತಿ ರೂಪಿಸುವವರೆಗೆ, ಕಾರ್ಮಿಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ತಕ್ಷಣ ಸೇವೆ ಪುನರಾರಂಭಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.