ADVERTISEMENT

ಕಂಪನಿಗಳ ವಿಲೀನ ಶುಲ್ಕ ಇಳಿಕೆಗೆ ಮಸೂದೆಗೆ ಸಂಪುಟ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2022, 19:30 IST
Last Updated 9 ಫೆಬ್ರುವರಿ 2022, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕಂಪನಿಗಳ ವಿಲೀನ ಪ್ರಕ್ರಿಯೆಯ ಶುಲ್ಕವನ್ನು ಗರಿಷ್ಠ ₹ 25 ಕೋಟಿಗೆ ಮಿತಿಗೊಳಿಸಲು ನೋಂದಣಿ ಮತ್ತು ಮುದ್ರಾಂಕ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

‘ಕಂಪನಿಗಳ ಮೌಲ್ಯದ ಆಧಾರದಲ್ಲಿ ಶುಲ್ಕ ನಿಗದಿ ಮಾಡುವ ವ್ಯವಸ್ಥೆ ಇದೆ. ಇದರಿಂದಾಗಿ ಹೆಚ್ಚಿನ ಉದ್ಯಮಿಗಳು ಕಂಪನಿಗಳ ವಿಲೀನ ಪ್ರಕ್ರಿಯೆಯನ್ನು ರಾಜ್ಯದಲ್ಲಿ ನೋಂದಣಿ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ಕಾರಣದಿಂದ ಮಹಾರಾಷ್ಟ್ರ ಮಾದರಿಯಲ್ಲಿ ಗರಿಷ್ಠ 25 ಕೋಟಿ ಮಿತಿ ವಿಧಿಸಲು ತಿದ್ದುಪಡಿ ತರಲಾಗುತ್ತಿದೆ’ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ಸಕ್ಕರೆ ಕಾರ್ಖಾನೆ ಗುತ್ತಿಗೆಗೆ: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ರನ್ನ ನಗರದಲ್ಲಿರುವ ರೈತರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಗಿರಿಜಾರಮಣ ಇಂಪೆಕ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂನಿಗೆ ₹ 320 ಕೋಟಿಗೆ 40 ವರ್ಷಗಳ ಅವಧಿಗೆ ಗುತ್ತಿಗೆಗೆ ನೀಡುವ ನಿರ್ಧಾರವನ್ನೂ ಸಂಪುಟ ಅನುಮೋದಿಸಿದೆ ಎಂದರು.

ADVERTISEMENT

ವಿಜಯಪುರ ಮಹಾನಗರ ಪಾಲಿಕೆಯಲ್ಲಿ ದೀರ್ಘಾವಧಿ ಗುತ್ತಿಗೆಗೆ ನೀಡಿರುವ 366 ಆಸ್ತಿಗಳನ್ನು ಸರ್ಕಾರ ಈಗಾಗಲೇ ನಿಗದಿಪಡಿಸಿರುವ ದರದ ಜತೆಗೆ ಬಡ್ಡಿ ಮೊತ್ತ ಸೇರಿಸಿ ಖರೀದಿಗೆ ನೀಡುವ ಪ್ರಸ್ತಾವಕ್ಕೂ ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದರು.

ಇತರ ತೀರ್ಮಾನಗಳು:

* ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿನ ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ₹ 17 ಕೋಟಿ.

* ಬೆಳಗಾವಿ ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ₹ 28.63 ಕೋಟಿ ವೆಚ್ಚದ ಆರು ರಸ್ತೆ ಕಾಮಗಾರಿಗಳ ಸ್ಥಳ ಬದಲಾವಣೆಗೆ ಒಪ್ಪಿಗೆ.

* ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಝಂಝರವಾಡ ಗ್ರಾಮದ ಬಳಿ ಕೃಷ್ಣಾ ನದಿಯಿಂದ ಏತ ನೀರಾವರಿ ಮೂಲಕ ನೀರು ಎತ್ತಿ ಯಲ್ಲಮ್ಮನವಾಡಿ ಕೆರೆಗೆ ನೀರು ತುಂಬಿಸುವ ₹ 49.51 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.