ADVERTISEMENT

ಜೇಷ್ಠತೆ ಆಧಾರದ ಮೇಲೆ ಬಿಲ್‌ ಪಾವತಿ: ಆರ್‌.ಅಶೋಕ್‌

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2022, 12:26 IST
Last Updated 1 ನವೆಂಬರ್ 2022, 12:26 IST

ಮಂಡ್ಯ: ‘ದಯಾಮರಣ ಕೋರಿ ಬಹಳಷ್ಟು ಮಂದಿ ಪತ್ರ ಬರೆಯುತ್ತಾರೆ, ಕಾನೂನು ಪ್ರಕಾರ ಅವರಿಗೆ ಏನು ಸಿಗಬೇಕೋ ಅದಷ್ಟು ಮಾತ್ರ ಸಿಗುತ್ತದೆ’ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಮಂಗಳವಾರ ಹೇಳಿದರು.

ಹುಬ್ಬಳ್ಳಿ ಗುತ್ತಿಗೆದಾರರೊಬ್ಬರು ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿರುವ ಹಿನ್ನೆಲೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಅಶೋಕ್‌ ಪ್ರತಿಕ್ರಿಯಿಸಿದರು.

‘ಜೇಷ್ಠತೆ ಆಧಾರದ ಮೇಲೆ ಗುತ್ತಿಗೆದಾರರಿಗೆ ಬಿಲ್‌ ಪಾವತಿ ಮಾಡಲಾಗುತ್ತದೆ. ಈ ವಿಚಾರದಲ್ಲಿ ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ, ತಕ್ಷಣವೇ ಅವರನ್ನು ಅಮಾನತು ಮಾಡಲಾಗುವುದು. ಲೋಕಯುಕ್ತಕ್ಕೆ ದೂರು ಸಲ್ಲಿಸಿದರೂ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು’ ಎಂದರು.

ADVERTISEMENT

‘ಲೋಕೋಪಯೋಗಿ ಇಲಾಖೆಯಲ್ಲಿ ಲಕ್ಷಾಂತರ ಜನರು ಗುತ್ತಿಗೆದಾರರ ಕಾಮಗಾರಿ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಜೇಷ್ಠತೆ ಮಾನದಂಡ ಅನುಸರಿಸಿ ಬಿಲ್‌ ಮಾಡುತ್ತಿದ್ದಾರೆ. ಗುತ್ತಿಗೆದಾರರಿಗೆ ನ್ಯಾಯಯುತವಾಗಿ ಹಣ ಪಾವತಿ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಯಾವುದೇ ತಾರತಮ್ಯ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.