ADVERTISEMENT

ಸೆ.1ರಿಂದ ಬಯೊಮೆಟ್ರಿಕ್ ಹಾಜರಾತಿ ಕಡ್ಡಾಯ

ಆರೋಗ್ಯ ಇಲಾಖೆ ಆಯುಕ್ತರ ಆದೇಶ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2019, 19:04 IST
Last Updated 17 ಆಗಸ್ಟ್ 2019, 19:04 IST

ಬೆಂಗಳೂರು: ‘ಆರೋಗ್ಯ ಇಲಾಖೆಯ ಎಲ್ಲ ಕಚೇರಿ, ಸರ್ಕಾರಿ ಆಸ್ಪತ್ರೆ ಹಾಗೂ ತರಬೇತಿ ಕೇಂದ್ರಗಳಲ್ಲಿ ಸೆ.1ರಿಂದ ಕಡ್ಡಾಯವಾಗಿ ಬಯೊಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ತರಬೇಕು’ ಎಂದು ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಎಲ್ಲೆಡೆ ಅಂತರ್ಜಾಲ ಸಂಪರ್ಕವಿದೆ. ಆಧಾರ್ ಆಧಾರಿತ ಬಯೊ ಮೆಟ್ರಿಕ್ ಹಾಜರಾತಿ ವ್ಯವಸ್ಥೆ ಯನ್ನು (ಎಇಬಿಎಎಸ್) ಜಾರಿಗೊಳಿಸಬಹುದು. ಇದಕ್ಕೆ ತಗಲುವ ವೆಚ್ಚವನ್ನು ಆರೋಗ್ಯ ರಕ್ಷಣಾ ಸಮಿತಿಯ ಅನುದಾನದಿಂದ ಭರಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT