ADVERTISEMENT

ಪಿಯು ಕಾಲೇಜುಗಳಲ್ಲಿ ಬಯೋ ಮೆಟ್ರಿಕ್ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 2 ಮೇ 2019, 19:57 IST
Last Updated 2 ಮೇ 2019, 19:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ತಕ್ಷಣವೇ ಬಯೋ ಮೆಟ್ರಿಕ್‌ ಹಾಜರಾತಿ ಪಡೆಯದೇ ಇದ್ದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

ಆಧಾರ್‌ ಆಧಾರಿತ ಆನ್‌ಲೈನ್‌ ಬಯೋಮೆಟ್ರಿಕ್‌ನಲ್ಲಿ ಹಾಜರಾತಿ ತೆಗೆದುಕೊಂಡ ಬಗ್ಗೆಇದೇ 4 ರೊಳಗೆ ಕಾಲೇಜುಗಳ ಮುಖ್ಯಸ್ಥರು ಇಲಾಖೆಗೆ ವರದಿ ಮಾಡಬೇಕು ಎಂದು ಇಲಾಖಾ ಜಂಟಿ ನಿರ್ದೇಶಕರು ಆದೇಶಿಸಿದ್ದಾರೆ.

ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್‌ ಅಳವಡಿಕೆ 2013 ರಲ್ಲೇ ಕಡ್ಡಾಯಗೊಳಿಸಲಾಗಿತ್ತಾದರೂ ಅನುಷ್ಠಾನ ಆಗಿರಲಿಲ್ಲ. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಒಂದಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕಾಲೇಜುಗಳಿಗೆ ಹಾಜರಾಗುತ್ತಿಲ್ಲ. ಇವರು ಟ್ಯೂಷನ್‌, ರಿಯಲ್ ಎಸ್ಟೇಟ್‌ ಮತ್ತಿತರ ಕೆಲಸ ಮಾಡಿಕೊಂಡು ಓಡಾಡುತ್ತಿದ್ದಾರೆ ಎಂಬ ದೂರು ಕೇಳಿ ಬಂದಿದೆ. ಇದಕ್ಕೆ ಕಡಿವಾಣ ಹಾಕಿದರೆ ಶಿಸ್ತು ತರಲು ಸಾಧ್ಯ ಎಂಬುದು ಅಧಿಕಾರಿಗಳಸಮಜಾಯಿಷಿ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.