ADVERTISEMENT

ಹಕ್ಕಿಜ್ವರ ಹಿನ್ನೆಲೆ: ಬನ್ನಿಕೋಡಿಗೆ ಅಧಿಕಾರಿಗಳ ತಂಡ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2020, 5:12 IST
Last Updated 17 ಮಾರ್ಚ್ 2020, 5:12 IST
   

ದಾವಣಗೆರೆ: ಹರಿಹರ ತಾಲ್ಲೂಕಿನ ಬನ್ನಿಕೋಡಿನಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ದಾವಣಗೆರೆ ಹಾಗೂ ಹರಿಹರ ತಾಲ್ಲೂಕಿನ ಆರೋಗ್ಯಾಧಿಕಾರಿಗಳು ಹಾಗೂ ಪಶುಸಂಗೋಪನಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬನ್ನಿಕೋಡು ಗ್ರಾಮದ ಅಭಿಷೇಕ್‌ ಅವರ ಪೌಲ್ಟ್ರಿ ಫಾರ್ಮ್‌ನಿಂದ ಹಕ್ಕಿಜ್ವರ ವೈರಾಣು ಕಾಣಿಸಿಕೊಂಡಿದ್ದು, ಭೋಪಾಲ್‌ನ ಪ್ರಯೋಗಾಲಯದಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಫಾರಂ ಮಾಲೀಕ ಅಭಿಷೇಕ್ ಈಗಾಗಲೇ ಕೋಳಿಗಳನ್ನು ಈಗಾಗಲೇ ನಾಶಪಡಿಸಿದ್ದಾರೆ.

ಬನ್ನಿಕೋಡು ಸುತ್ತಲಿನ 1ಕಿ.ಮೀ ಪ್ರದೇಶವನ್ನು ‘ಸೋಂಕಿತ ವಲಯ’ (ಇನ್ಫೆಕ್ಟೆಡ್‌ ಝೋನ್‌) ಎಂದು ಹಾಗೂ 10 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ‘ಸರ್ವೇಕ್ಷಣಾ ವಲಯ’ (ಸರ್ವೇಲೆನ್ಸ್‌ ಝೋನ್‌) ಎಂದು ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಪಶು ಸಾಂಗೋಪನಾ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಲಿದ್ದು, ವಿಷಯ ಕುರಿತು ಚರ್ಚೆ ನಡೆಯಲಿದ್ದು, ಸರ್ಕಾರದ ಮಾರ್ಗಸೂಚಿ ಅನ್ವಯ ಕಾರ್ಯಾಚರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಈ ಕಾರ್ಯಾಚರಣೆಯಲ್ಲಿ ಭಾಗವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಕ್ತ ಸಂರಕ್ಷಣೆ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.