ADVERTISEMENT

ಹಕ್ಕಿ ಜ್ವರ ಭೀತಿ: ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 15:57 IST
Last Updated 5 ಜನವರಿ 2021, 15:57 IST
   

ಬೆಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ಹಕ್ಕಿಜ್ವರ ಪತ್ತೆಯಾದ ಬೆನ್ನಲ್ಲೆ, ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಮೈಸೂರು, ಚಾಮರಾಜನಗರ, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪಶುಸಂಗೋಪನೆ ಇಲಾಖೆ ನಿರ್ದೇಶನ ನೀಡಿದೆ.

ರಾಜ್ಯದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪಶು ಸಂಗೋಪನಾ ಸಚಿವ ಪ್ರಭು ಬಿ. ಚೌಹಾಣ್ ಅವರುಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಬುಧವಾರ (ಜ. 6) ಸಭೆ ನಡೆಸಲಿದ್ದಾರೆ.

‘ರಾಜ್ಯಕ್ಕೆ ಹಕ್ಕಿ ಜ್ವರ ಕಾಲಿಟ್ಟಿಲ್ಲ. ಆದರೆ, ಕೇರಳದ ಕೊಟ್ಟಾಯಂನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವುದರಿಂದ ಹೊರ ರಾಜ್ಯಗಳಿಗೆ ಹೊಂದಿಕೊಂಡಿರುವ ಗಡಿಗಳಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ತುರ್ತು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ’ ಎಂದು ಪಶು ಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ನಿರ್ದೇಶಕ ಡಾ. ಬಿ.ಎನ್‌ . ಶಿವರಾಮ್ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.