ADVERTISEMENT

ಬಿಟ್‌ಕಾಯಿನ್: ಕಾಂಗ್ರೆಸ್ ನಾಯಕರಿಂದ ಗೊಂದಲ ಸೃಷ್ಟಿ, ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2021, 19:53 IST
Last Updated 11 ನವೆಂಬರ್ 2021, 19:53 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ಬೆಂಗಳೂರು: 'ಬಿಟ್‌ಕಾಯಿನ್ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಅನಗತ್ಯವಾಗಿ ಗೊಂದಲ ಉಂಟು ಮಾಡುತ್ತಿದ್ದಾರೆ. ಅವರ ಬಳಿ ಸೂಕ್ತ ದಾಖಲೆಗಳಿದ್ದರೆ ತನಿಖಾಧಿಕಾರಿಗಳಿಗೆ ನೀಡಲಿ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸವಾಲು ಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ಚೀಲದಲ್ಲಿ ಹಾವಿದೆ. ಹೊರ ತೆಗೆಯುತ್ತೇವೆ ಎಂದು ಕಾಂಗ್ರೆಸ್ ನಾಯಕರು ಆಧಾರಹಿತವಾಗಿ ಮಾತನಾಡದೆ ಅದನ್ನು ಧೈರ್ಯದಿಂದ ಹೊರಗೆ ಬಿಡಲಿ. ಆಗ ಅದು ಯಾರನ್ನು ಕಚ್ಚುತ್ತದೆ ನೋಡೋಣ’ ಎಂದರು.

‘ದಾಖಲೆ ಇದ್ದರೆ ಪ್ರತಿಪಕ್ಷಗಳು ಕೊಡಲಿ’
ಮಾಗಡಿ (ರಾಮನಗರ): ಬಿಟ್ ಕಾಯಿನ್ ವಿಚಾರದಲ್ಲಿ‌ ರಾಜ್ಯ ಸರ್ಕಾರ ಎಲ್ಲ ರೀತಿಯ ತನಿಖೆಗೆ ಸಿದ್ಧವಿದೆ. ವಿರೋಧ ಪಕ್ಷಗಳು ಅಗತ್ಯ ದಾಖಲೆ ಇದ್ದರೆ‌ ಒದಗಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ADVERTISEMENT

ಮಾಗಡಿಯಲ್ಲಿ ಗುರುವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು‌. ಮುಖ್ಯಮಂತ್ರಿ ಬೊಮ್ಮಾಯಿ ರಾಜ್ಯದ ಪ್ರತಿನಿಧಿಯಾಗಿ ಪ್ರಧಾನಿ ಅವರನ್ನು ಭೇಟಿ ಮಾಡಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ‌ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಸುದ್ದಿ ಬರೀ ಊಹಾಪೋಹ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.