ADVERTISEMENT

‘ವೀರಶೈವ ಲಿಂಗಾಯತರಿಗೆ ಕೇಂದ್ರ ಸಂಪುಟದಲ್ಲಿ ಇನ್ನೂ ಎರಡು ಸಚಿವ ಸ್ಥಾನ ನೀಡಬೇಕು’

​ಪ್ರಜಾವಾಣಿ ವಾರ್ತೆ
Published 31 ಮೇ 2019, 18:40 IST
Last Updated 31 ಮೇ 2019, 18:40 IST

ಬೆಳಗಾವಿ: ‘ಲೋಕಸಭೆ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯ ಸಂಪೂರ್ಣವಾಗಿ ಬಿಜೆಪಿಯನ್ನು ಬೆಂಬಲಿಸಿದೆ. ಸಚಿವ ಸಂಪುಟದಲ್ಲಿ ಈಗ ಒಬ್ಬರಿಗೆ (ಸುರೇಶ ಅಂಗಡಿ) ಮಾತ್ರ ಅವಕಾಶ ಸಿಕ್ಕಿದೆ. ಇನ್ನೂ ಇಬ್ಬರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು.

ನಗರದಲ್ಲಿ ಮಾತನಾಡಿದ ಅವರು, ‘ವೀರಶೈವ ಲಿಂಗಾಯತ ಸಮುದಾಯದವರು ಉತ್ತರ ಕರ್ನಾಟಕದ 14 ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿಕೊಟ್ಟಿದ್ದಾರೆ. ಸಚಿವ ಸಂಪುಟದ ವಿಸ್ತರಣೆಯಲ್ಲಿ ಒಂದು ಸಂಪುಟ ದರ್ಜೆ ಹಾಗೂ ಒಂದು ರಾಜ್ಯ ಸಚಿವ ಸ್ಥಾನ ನೀಡಬೇಕು. ದಲಿತರು ಹಾಗೂ ಹಿಂದುಳಿದ ವರ್ಗದವರಿಗೂ ನೀಡಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT