ADVERTISEMENT

ಕಾಂಗ್ರೆಸ್‌ನಿಂದ ದುರ್ಬಲರ ವಿರುದ್ಧವಷ್ಟೇ ಶಿಸ್ತುಕ್ರಮ: ಬಿಜೆಪಿ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಅಕ್ಟೋಬರ್ 2021, 11:49 IST
Last Updated 22 ಅಕ್ಟೋಬರ್ 2021, 11:49 IST
   

ಬೆಂಗಳೂರು: ರಾಜ್ಯ ಕಾಂಗ್ರೆಸ್ ದುರ್ಬಲರ ವಿರುದ್ಧವಷ್ಟೇ ಕ್ರಮ ಕೈಗೊಳ್ಳುತ್ತದೆ ಎಂದು ಬಿಜೆಪಿ ಟೀಕಿಸಿದೆ.

‘ಶಿಸ್ತು ಸಮಿತಿ ನೋಟಿಸ್ ನೀಡಿದ್ದರೂ ಉತ್ತರಿಸದೇ ಇರುವ ಉಗ್ರಪ್ಪ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಫಲರಾಗಿದ್ದಾರೆ. ಡಿಕೆಶಿ ಅವರಿಗೆ ಉಗ್ರಪ್ಪ ಕಂಡರೆ ಭಯವೋ ಅಥವಾ ಉಗ್ರಪ್ಪ ಅವರು ಸಿದ್ದರಾಮಯ್ಯ ಅವರ ಬಣವೆಂಬ ಭೀತಿಯೋ’ ಎಂದು ಬಿಜೆಪಿ ಟ್ವೀಟ್ ಮೂಲಕ ಪ್ರಶ್ನಿಸಿದೆ.

‘ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಪಕ್ಷ ಬಾವಿಯಲ್ಲಿ ಇಟ್ಟಿದೆ ಎಂದು ಸಿಂಎ ಹೇಳಿರುವುದು ಅಕ್ಷರಶಃ ಸತ್ಯ. ಸಲೀಂ ಅವರನ್ನು ಪಕ್ಷದಿಂದ ಉಚ್ಚಾಟಿಸಿ, ಉಗ್ರಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳಲು ಹೆದರುತ್ತಿದ್ದಾರೆ. ಇದೆಲ್ಲ ಗಮನಿಸಿದಾಗ, ಪಿಸುಮಾತಿನ ಪ್ರಹಸನ ಸಿದ್ದರಾಮಯ್ಯ ನಿರ್ದೇಶನದಲ್ಲಿ ಮೂಡಿಬಂದಿದೆ ಎನ್ನುವುದು ಸ್ಪಷ್ಟವಾಗುತ್ತಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಕಾಂಗ್ರೆಸ್ ನಾಯಕ ಸಲೀಂ ಮತ್ತು ಉಗ್ರ‍ಪ್ಪ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಇತ್ತೀಚೆಗೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸಲೀಂ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಉಗ್ರಪ್ಪ ಅವರಿಗೆ ನೋಟಿಸ್ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.