
ಬೆಂಗಳೂರು: ‘ಸಂವಿಧಾನದ ಆಶಯಗಳನ್ನು ಜನರಿಗೆ ಮುಟ್ಟಿಸಲು, ಬಿಜೆಪಿ ವತಿಯಿಂದ ನವೆಂಬರ್ 26ರಿಂದ ಡಿಸೆಂಬರ್ 6ರವರೆಗೆ ಭೀಮ ನಡೆ ಕಾರ್ಯಕ್ರಮ ನಡೆಸುತ್ತೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.
ಪಕ್ಷದ ನಾಯಕರ ಜತೆಗೆ ಬುಧವಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ರಾಜ್ಯದಾದ್ಯಂತ ಈ ಕಾರ್ಯಕ್ರಮವು ನಡೆಯಲಿದೆ. ಸಂವಿಧಾನದ ಆಶಯ ಮತ್ತು ಕಾಂಗ್ರೆಸ್ ಪಕ್ಷವು ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಬಗೆದ ದ್ರೋಹದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು’ ಎಂದರು.
‘ಕಾಂಗ್ರೆಸ್ ಪಕ್ಷವು ಅಂಬೇಡ್ಕರ್ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಿತ್ತು. ಅವರಿಗೆ ಭಾರತ ರತ್ನ ಕೊಡಲಿಲ್ಲ. ಅವರು ಮೃತರಾದಾಗ ಸಮಾಧಿಗೆ ಸ್ಥಳವನ್ನೇ ನೀಡಲಿಲ್ಲ. ಈ ವಿಚಾರಗಳನ್ನು ರಾಜ್ಯದ ಎಲ್ಲ ನಾಗರಿಕರಿಗೂ ತಲುಪಿಸುತ್ತೇವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.