ADVERTISEMENT

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ವಿಧಾನಸಭೆಯಲ್ಲಿ ಗದ್ದಲ, ಕಲಾಪ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2024, 5:44 IST
Last Updated 28 ಫೆಬ್ರುವರಿ 2024, 5:44 IST
<div class="paragraphs"><p>ವಿಧಾನಸಭೆ ಕಲಾಪ (ಸಂಗ್ರಹ ಚಿತ್ರ)</p></div>

ವಿಧಾನಸಭೆ ಕಲಾಪ (ಸಂಗ್ರಹ ಚಿತ್ರ)

   

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಗದ್ದಲ ಉಂಟಾಗಿದ್ದು, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಲಾಪವನ್ನು ಮುಂದೂಡಿದರು.

ಧ್ವನಿ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಸರ್ಕಾರ ವಿಧಾನಸಭೆಯಲ್ಲಿ ಉತ್ತರ ನೀಡಲಿದೆ.

ADVERTISEMENT

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ವಿರುದ್ಧ ಹೊಸಪೇಟೆಯ ಪುನೀತ್ ರಾಜ್‍ಕುಮಾರ್ ವೃತ್ತದಲ್ಲಿ ಬಿಜೆಪಿ ವತಿಯಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು

ಶುಕ್ರವಾರದಿಂದ ಕಲಾಪ ಮುಂದೂಡಿಕೆ

ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸಿರುವುದನ್ನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಕಳೆದವಾರ ಸರಣಿ ಪ್ರತಿಭಟನೆ ನಡೆಸಿದ್ದವು. ಹಾಗಾಗಿ, ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿತ್ತು.

ಫೆಬ್ರುವರಿ 23ರಂದು (ಶುಕ್ರವಾರ) ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ಪೀಠದ ಎದುರು ಧರಣಿ ಮುಂದುವರಿಸಿದ್ದರು. ಕೇಂದ್ರ ಸರ್ಕಾರದ ವಿರುದ್ಧದ ನಿರ್ಣಯಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದ್ದರು.

ಗದ್ದಲದ ಮಧ್ಯದಲ್ಲೇ ಎರಡು ವರದಿಗಳ ಮಂಡನೆ ಮತ್ತು ಎರಡು ಮಸೂದೆಗಳ ಅಂಗೀಕಾರವಾಗಿತ್ತು. ಕೇಂದ್ರ ಸರ್ಕಾರವನ್ನು ಬೆಂಬಲಿಸಿ ಪ್ರತಿ ನಿರ್ಣಯ ಮಂಡಿಸಲು ಅವಕಾಶ ನೀಡುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮನವಿ ಮಾಡಿದ್ದರು. ಆದರೆ, ಸ್ಪೀಕರ್ ಒಪ್ಪಿರಲಿಲ್ಲ. ಗದ್ದಲದ‌ ಮಧ್ಯೆಯೇ ತಾವು ತಂದಿದ್ದ ನಿರ್ಣಯದ ಕರಡನ್ನು ಅಶೋಕ ಓದಿದ್ದರು. ಗದ್ದಲ‌ ಜೋರಾಗುತ್ತಿದ್ದಂತೆ ಸ್ಪೀಕರ್ ಅವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿದ್ದರು.

ಆದರೆ, ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಭಾನುವಾರ ನಿಧನರಾದ ಹಿನ್ನೆಲೆಯಲ್ಲಿ ಅವರಿಗೆ ಸೋಮವಾರ ಬೆಳಿಗ್ಗೆ ವಿಧಾನ ಪರಿಷತ್‌ನಲ್ಲಿ ಸಂತಾಪ ಸೂಚಿಸಿದ ಬಳಿಕ ಕಲಾಪವನ್ನು ಮತ್ತೆ ಬುಧವಾರಕ್ಕೆ ಮುಂದೂಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.