ADVERTISEMENT

ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 5:14 IST
Last Updated 16 ಏಪ್ರಿಲ್ 2021, 5:14 IST

ಬೆಂಗಳೂರು: ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆಗಳಿಗೆ ಶನಿವಾರ(ಏ.17) ನಡೆಯುವ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆ ಬಿದ್ದಿತು.

ಶುಕ್ರವಾರ ಮನೆ ಮನೆಗೆ ತೆರಳಿ ಪ್ರಚಾರ ನಡೆಸಬಹುದಾಗಿದೆ.

ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಪ್ರಚಾರ ನಡೆಸಿದರೆ, ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ರಾಜ್ಯಸಭೆಯಲ್ಲಿ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿರುಸಿನ ಪ್ರಚಾರ ನಡೆಸಿದರು. ಬಸವ ಕಲ್ಯಾಣದಲ್ಲಿ ಮಾತ್ರ ಜೆಡಿಎಸ್ ಸ್ಪರ್ಧಿಸಿದ್ದು, ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

ADVERTISEMENT

ಅನಾರೋಗ್ಯದಿಂದ ಯಡಿಯೂರಪ್ಪ ಮತ್ತು ಕೈಗೆ ಪೆಟ್ಟು ಮಾಡಿಕೊಂಡಿರುವ ಸಿದ್ದರಾಮಯ್ಯ ಅವರು ಗುರುವಾರ ಬೆಳಿಗ್ಗೆಯೇ ಪ್ರಚಾರ ಮೊಟಕುಗೊಳಿಸಿ ಬೆಂಗಳೂರಿಗೆ ಹಿಂದಿರುಗಿದರು.

ರಾಜ್ಯದ ಎರಡು ವಿಧಾನಸಭೆ ಮತ್ತು ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆ ಸೇರಿ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆಯನ್ನು ಏ.29 ರ ಸಂಜೆ 7.30ರವರೆಗೆ ಪ್ರಕಟಿಸುವಂತಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.