ಖರ್ಗೆ, ಅಶೋಕ
ಬೆಂಗಳೂರು: ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಈ ಹಿಂದೆ ಬಿಜೆಪಿ ನಾಯಕರ ಬಗ್ಗೆ ಮಾಡಿದ್ದ ಆರೋಪಗಳ ವಿಡಿಯೊ ಹಂಚಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು, "ಬಿಜೆಪಿಯ ವಿಷಲ್ ಬ್ಲೋವರ್" ಖ್ಯಾತಿಯ (ಮಾಹಿತಿ ಸೋರಿಕೆ ಮಾಡುವ) ಯತ್ನಾಳ್ ಅವರು ಹೇಳಿರುವ ಸಂಗತಿಗಳಿಗೆ ಉತ್ತರವಿದೆಯೇ? ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನು ಕೆಣಕಿದ್ದಾರೆ.
ಈ ಕುರಿತು ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಅಶೋಕ್ ಅವರೇ ಮೂರು ಹಗಲು, ಮೂರು ರಾತ್ರಿಯಲ್ಲಿ ಮಹಾಭಾರತದ ಕತೆಯನ್ನಾದರೂ ಹೇಳಿ ಮುಗಿಸಬಹುದು, ಆದರೆ ಬಿಜೆಪಿಯ ಭ್ರಷ್ಟಾಚಾರದ ಕತೆಗಳನ್ನು ಹೇಳಿ ಮುಗಿಸಲಾಗದು ಎಂದು ಅಣಕವಾಡಿದ್ದಾರೆ.
ಅಶೋಕ್ ಅವರು ತಮ್ಮ ಪಕ್ಷದ ಇತರ ನಾಯಕರ ಮೇಲಿರುವ ಕೋಪವನ್ನು ತೀರಿಸಿಕೊಳ್ಳಲೆಂದೇ ನಮ್ಮನ್ನು ಕೆಣಕುತ್ತಿದ್ದಾರೆ ಎನಿಸುತ್ತದೆ! ಎಂದಿದ್ದಾರೆ.
ಈಶ್ವರಪ್ಪನವರ ನಂತರ ನೋಟ್ ಕೌಂಟಿಂಗ್ ಮಷಿನ್ ಇಟ್ಟಿದ್ದ ಖ್ಯಾತಿಗೆ ಯಡಿಯೂರಪ್ಪನವರ ಆಪ್ತ ಪಾತ್ರರಾಗಿದ್ದಾರೆ. ಈ ನೋಟ್ ಕೌಂಟಿಂಗ್ ಮಷಿನ್ ಮಾಲೀಕರು ಯಾರು? ಜಗನ್ನಾಥ ಭವನವಾ? ಅಥವಾ ಕೇಶವ ಕೃಪನಾ? ಎಂದು ಪ್ರಾಶ್ನಿಸಿದ್ದಾರೆ.
ನಿಮ್ಮ ಪಕ್ಷದ ಅಧ್ಯಕ್ಷರು ಮೇಲಿಂದ ಮೇಲೆ ಮಾರಿಷಸ್, ದುಬೈ ದೇಶಗಳಿಗೆ ಹೋಗುವುದೇಕೆ? ಅಲ್ಲಿ ಎಷ್ಟು ಆಸ್ತಿಗಳನ್ನು ಮಾಡಿದ್ದಾರೆ? ಈ ಪ್ರಶ್ನೆಗಳನ್ನು ನಿಮ್ಮವರೆ ಕೇಳಿದ್ದಾರೆ ನೋಡಿ ಎಂದು ವಿಡಿಯೊ ತೋರಿಸಿದ್ದಾರೆ ಎಂದು ಅಶೋಕ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.