ಮಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಹಾಗೂ ಕೋರ್ ಕಮಿಟಿ ಸಭೆ ಗುರುವಾರ (ಇದೇ 5) ನಗರದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಡಿ.ವಿ. ಸದಾನಂದಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ರಾಜ್ಯ ಕಾರ್ಯಕಾರಿಣಿಯಲ್ಲಿ ಪ್ರಮುಖವಾಗಿ ಮುಂಬರುವ ಗ್ರಾಮ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿಬೂತ್ ಮಟ್ಟದ ‘ಪಂಚರತ್ನ’ ಸಮಿತಿ ರಚನೆ ಸೇರಿದಂತೆ ಕಾರ್ಯಯೋಜನೆ ರೂಪಿಸಲು ನಿರ್ಧರಿಸಲಾಗಿದೆ. ಇನ್ನೊಂದೆಡೆ ಪಕ್ಷದ ಪ್ರಮುಖರ ಕೋರ್ ಕಮಿಟಿ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ, ಗಸ್ತಿ ನಿಧನದಿಂದ ತೆರವಾದ ಸ್ಥಾನಕ್ಕೆ ಅಭ್ಯರ್ಥಿಯ ಆಯ್ಕೆ ಹಾಗೂ ಲವ್ ಜಿಹಾದ್ ತಡೆಗೆ ಕಾನೂನು ರೂಪಿಸುವ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.