ADVERTISEMENT

ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಅಕ್ಟೋಬರ್ 2021, 6:37 IST
Last Updated 25 ಅಕ್ಟೋಬರ್ 2021, 6:37 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ವಿಚಾರವಾಗಿ ಸೋಮವಾರ ಟ್ವೀಟ್‌ ಮಾಡಿರುವ ಬಿಜೆಪಿ, 'ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ' ಎಂದು ಆರೋಪಿಸಿದೆ.

'ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂಬುದಾಗಿ ಹೇಳುತ್ತೀರಿ ಸಿದ್ದರಾಮಯ್ಯ?' ಎಂದು ಬಿಜೆಪಿ ಪ್ರಶ್ನಿಸಿದೆ.

ADVERTISEMENT

'ಸಮಾಜವನ್ನು ಜಾತಿ ಆಧಾರದ ಮೇಲೆ ಒಡೆದು ರಾಜಕೀಯ ಲಾಭ ಪಡೆಯುವುದರಲ್ಲಿ ಸಿದ್ದರಾಮಯ್ಯ ಅವರಿಗಿಂತ ನಿಷ್ಣಾತರು ಬೇರೆ ಇಲ್ಲ. ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯ?' ಎಂದು ಬಿಜೆಪಿ ಹರಿಹಾಯ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.