ADVERTISEMENT

ಇದು 20 ಪರ್ಸೆಂಟ್‌ ಕಮಿಷನ್‌ ಸರ್ಕಾರ: ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2020, 21:02 IST
Last Updated 7 ಮಾರ್ಚ್ 2020, 21:02 IST
ಸಾಹಿತಿ ದೇವನೂರ ಮಹಾದೇವ ಬರೆದ ‘ಈಗ ಭಾರತ ಮಾತನಾಡುತ್ತಿದೆ..’ ಹಾಗೂ ಜೆಡಿಎಸ್‌ ಪಕ್ಷ ಹೊರತಂದಿರುವ ‘ಉತ್ತರ ಕರ್ನಾಟಕಕ್ಕೆ ದೇವೇಗೌಡರ ಕೊಡುಗೆ’ ಎಂಬ ಹೊತ್ತಿಗೆಯನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಬಿಡುಗಡೆ ಮಾಡಿದರು. ಎಂ.ಎಸ್‌. ಅಕ್ಕಿ, ವೈ.ಎಸ್‌.ವಿ.ದತ್ತ, ರಾಜಣ್ಣ ಕೊರವಿ, ಬಸವರಾಜ ಹೊರಟ್ಟಿ, ಎನ್‌.ಎಚ್‌.ಕೋನರಡ್ಡಿ, ಇದ್ದಾರೆ – ಪ್ರಜಾವಾಣಿ ಚಿತ್ರ
ಸಾಹಿತಿ ದೇವನೂರ ಮಹಾದೇವ ಬರೆದ ‘ಈಗ ಭಾರತ ಮಾತನಾಡುತ್ತಿದೆ..’ ಹಾಗೂ ಜೆಡಿಎಸ್‌ ಪಕ್ಷ ಹೊರತಂದಿರುವ ‘ಉತ್ತರ ಕರ್ನಾಟಕಕ್ಕೆ ದೇವೇಗೌಡರ ಕೊಡುಗೆ’ ಎಂಬ ಹೊತ್ತಿಗೆಯನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಬಿಡುಗಡೆ ಮಾಡಿದರು. ಎಂ.ಎಸ್‌. ಅಕ್ಕಿ, ವೈ.ಎಸ್‌.ವಿ.ದತ್ತ, ರಾಜಣ್ಣ ಕೊರವಿ, ಬಸವರಾಜ ಹೊರಟ್ಟಿ, ಎನ್‌.ಎಚ್‌.ಕೋನರಡ್ಡಿ, ಇದ್ದಾರೆ – ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ‘ಪ್ರಧಾನಿ ಮೋದಿ ಅವರು ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಶೇ 10 ಪರ್ಸೆಂಟ್‌ ಕಮಿಷನ್‌ ಸರ್ಕಾರ ಎಂದು ಟೀಕಿಸಿದ್ದರು. ಆದರೆ, ಈಗಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಶೇ 20 ಪರ್ಸೆಂಟ್‌ ಕಮಿಷನ್‌ ಸರ್ಕಾರವಾಗಿದೆ. ಭ್ರಷ್ಟಾಚಾರ ಮಿತಿಮೀರಿದೆ. ಹಣ ನೀಡದೇ ಜನಸಾಮಾನ್ಯರ ಯಾವುದೇ ಕೆಲವೂ ಆಗುತ್ತಿಲ್ಲ’ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಆರೋಪಿಸಿದರು.

ನಗರದಲ್ಲಿ ಶನಿವಾರ ಆರಂಭವಾದ ಎರಡು ದಿನಗಳ ಬೆಳಗಾವಿ ವಿಭಾಗ ಮಟ್ಟದ ಜೆಡಿಎಸ್‌ ಕಾರ್ಯಕರ್ತರ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಜೆಡಿಎಸ್‌ ಮುಖಂಡರ ನಡೆಯ ಬಗ್ಗೆ ಹಲವು ವ್ಯಾಖ್ಯಾನಗಳು, ಟೀಕೆ, ಟಿಪ್ಪಣಿಗಳು ವ್ಯಕ್ತವಾಗುತ್ತಿವೆ. ಪಕ್ಷ ಅಧಿಕಾರದಲ್ಲಿ ಇದ್ದಾಗ ನಿಷ್ಠಾವಂತ ಕಾರ್ಯಕರ್ತರು ಕಡೆಗಣನೆಗೆ ಒಳಗಾಗಿದ್ದಾರೆ. ಇದಕ್ಕೆ ಪಕ್ಷದ ವರಿಷ್ಠರು ಸ್ಪಷ್ಟನೆ ನೀಡಬೇಕು. ಹಿಂದಿನ ತಪ್ಪುಗಳನ್ನು ಸರಿಪಡಿಸಿಕೊಂಡು ಸಂಘಟನೆಗೆ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಬಲಿಷ್ಠ ಪ್ರಾದೇಶಿಕ ಪಕ್ಷವಾಗಿ ಜೆಡಿಎಸ್‌: ‘ಜೆಡಿಎಸ್‌ ಅನ್ನು ಬಲಿಷ್ಠ ಪ್ರಾದೇಶಿಕ ಪಕ್ಷವಾಗಿ ಬಲಪಡಿಸುವ ಉದ್ದೇಶದಿಂದ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ’ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.

‘ನಾನು ರಾಜಕೀಯ ಪ್ರವೇಶಿಸಿ 59 ವರ್ಷವಾಯಿತು. ಅನೇಕ ಏಳುಬೀಳು ಕಂಡಿದ್ದೇನೆ. ಕೆಲವರು ನನ್ನನ್ನು ಜಾತಿವಾದಿ ಎಂದು, ಇನ್ನು ಕೆಲವರು ಜೆಡಿಎಸ್ ಹಳೇ ಮೈಸೂರಿಗೆ ಸೀಮಿತವಾದ ಪಕ್ಷ ಎಂದು ಬಿಂಬಿಸುತ್ತಿದ್ದಾರೆ. ಈ ಬಗ್ಗೆ ಪಕ್ಷದ ಕಾರ್ಯಕರ್ತರು ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸಬೇಕು. ಎಲ್ಲಿ ಎಡವಿದ್ದೇವೆ ಎಂಬುದನ್ನು ತಿಳಿಸಬೇಕು’ ಎಂದು ಮನವಿ ಮಾಡಿದರು.

ಮುಖಂಡರಾದ ವೈ.ಎಸ್‌.ವಿ.ದತ್ತ. ಎನ್‌.ಎಚ್‌.ಕೋನರಡ್ಡಿ, ತಿಪ್ಪೇಸ್ವಾಮಿ, ಎಂ.ಎಸ್‌.ಅಕ್ಕಿ ಇದ್ದರು.

'ಬಲಿಷ್ಠ ಪ್ರಾದೇಶಿಕ ಪಕ್ಷವಾಗಿ ಜೆಡಿಎಸ್‌’
‘ಜೆಡಿಎಸ್‌ ಅನ್ನು ಬಲಿಷ್ಠ ಪ್ರಾದೇಶಿಕ ಪಕ್ಷವಾಗಿ ಬಲಪಡಿಸುವ ಉದ್ದೇಶದಿಂದ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ’ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.

‘ಕೆಲವರು ನನ್ನನ್ನು ಜಾತಿವಾದಿ ಎಂದು, ಇನ್ನು ಕೆಲವರು ಜೆಡಿಎಸ್ ಹಳೇ ಮೈಸೂರಿಗೆ ಸೀಮಿತವಾದ ಪಕ್ಷ ಎಂದು ಬಿಂಬಿಸುತ್ತಿದ್ದಾರೆ. ಈ ಬಗ್ಗೆ ಪಕ್ಷದ ಕಾರ್ಯಕರ್ತರು ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸಬೇಕು. ಎಲ್ಲಿ ಎಡವಿದ್ದೇವೆ ಎಂಬುದನ್ನು ತಿಳಿಸಬೇಕು’ ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.