ADVERTISEMENT

ಮಕ್ಕಳ ಜೀವ ಮತ್ತು ಜೀವನದ ಜೊತೆ ಆಟವಾಡುತ್ತಿದೆ ಭ್ರಷ್ಟ ಸರ್ಕಾರ: ಕಾಂಗ್ರೆಸ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಸೆಪ್ಟೆಂಬರ್ 2021, 6:54 IST
Last Updated 18 ಸೆಪ್ಟೆಂಬರ್ 2021, 6:54 IST
ವೈರಾಣು ಜ್ವರದಿಂದ ಬಳಲುತ್ತಿರುವ ಮಕ್ಕಳಿಗೆ ನಗರದ ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವುದು - ಪ್ರಜಾವಾಣಿ ಚಿತ್ರ
ವೈರಾಣು ಜ್ವರದಿಂದ ಬಳಲುತ್ತಿರುವ ಮಕ್ಕಳಿಗೆ ನಗರದ ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವುದು - ಪ್ರಜಾವಾಣಿ ಚಿತ್ರ   

ಬೆಂಗಳೂರು: ಕೊರೊನಾ ಮೂರನೇ ಅಲೆಯನ್ನು ಎದುರಿಸಲು ರಾಜ್ಯ ಸರ್ಕಾರ ಯಾವ ಸಿದ್ಧತೆಯನ್ನೂ ಮಾಡಿಕೊಂಡಿಲ್ಲ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಪ್ರಜಾವಾಣಿ ವರದಿ 'ಮಕ್ಕಳನ್ನು ಕಾಡಲಾರಂಭಿಸಿದ ವೈರಾಣು ಜ್ವರ' ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಕೊರೊನಾ 3ನೇ ಅಲೆಯನ್ನು ಎದುರಿಸಲು ಯಾವ ಸಿದ್ಧತೆಯನ್ನೂ ಮಾಡಿಕೊಂಡಿಲ್ಲ ಎಂಬುದಕ್ಕೆ ನಿದರ್ಶನ ಎಂದಿದೆ. ಮಕ್ಕಳಿಗೆ ಮೋಸ ಎಂಬ ಹ್ಯಾಶ್‌ಟ್ಯಾಗ್‌ ಬಳಕೆ ಮಾಡಿ ಟ್ವೀಟ್‌ ಮಾಡಿದೆ.

'ಹಲವು ಜಿಲ್ಲೆಗಳಲ್ಲಿ ಮಕ್ಕಳಿಗೆ ಕಾಣಿಸಿಕೊಂಡಿರುವ ವೈರಲ್‌ ಜ್ವರಕ್ಕೆ ಬೆಡ್‌ ಸಿಗುತ್ತಿಲ್ಲ, ಚಿಕಿತ್ಸೆ ಸಿಗುತ್ತಿಲ್ಲ, ಮಕ್ಕಳ ತಜ್ಞ ವೈದ್ಯರ ಕೊರತೆ ಇದೆ. ಈಗಲೇ ಬೆಡ್‌ಗಳ ಕೊರತೆ ಎದುರಾಗಿರುವುದು ಈ ಭ್ರಷ್ಟ ಸರ್ಕಾರ ಕೊರೊನಾ 3ನೇ ಅಲೆ ಎದುರಿಸಲು ಯಾವ ಸಿದ್ಧತೆಯನ್ನೂ ಮಾಡಿಕೊಂಡಿಲ್ಲ ಎಂಬುದಕ್ಕೆ ನಿದರ್ಶನ' ಎಂದು ಟ್ವೀಟ್‌ನಲ್ಲಿ ತಿಳಿಸಿದೆ.

ADVERTISEMENT

'ಕೊರೊನಾ ಕ್ಲಿಷ್ಟ ಪರಿಸ್ಥಿತಿಯಿಂದ ಬಿಜೆಪಿ ಸರ್ಕಾರ ಪಾಠ ಕಲಿತಿಲ್ಲ, ವೈದ್ಯಕೀಯ ವ್ಯವಸ್ಥೆ ಬಲಗೊಳಿಸಿಲ್ಲ. ಮಕ್ಕಳ ಜೀವ ಮತ್ತು ಜೀವನದ ಜೊತೆ ಆಟವಾಡುತ್ತಿದೆ ಭ್ರಷ್ಟ ಸರ್ಕಾರ' ಎಂದು ಮತ್ತೊಂದು ಟ್ವೀಟ್‌ನಲ್ಲಿ ದೂರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.