ಬೆಂಗಳೂರು: ‘ಬಾಗಲಕೋಟೆಯ ತೋಟಗಾರಿಕಾ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿಗೆ ವಿಧಾನಪರಿಷತ್‌ನ ಬಿಜೆಪಿ ಸದಸ್ಯ ಹಣಮಂತ ನಿರಾಣಿ ಅವರನ್ನು ನಾಮನಿರ್ದೇಶನ ಮಾಡಿ ತೋಟಗಾರಿಕಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.
ವಿಧಾನಪರಿಷತ್‌ನಿಂದ ಎಂಟು ತಿಂಗಳ ಹಿಂದೆಯೇ ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ, ಆದೇಶ ಹೊರಡಿಸಿರಲಿಲ್ಲ. ಈ ಪ್ರಕರಣವನ್ನು ಹಕ್ಕುಚ್ಯುತಿಗೆ ನೀಡುವುದಾಗಿ ಸಭಾಪತಿ ಬಸವರಾಜ ಹೊರಟ್ಟಿ ಕಲಾಪದ ವೇಳೆ ಎಚ್ಚರಿಸಿದರು. ನಂತರ ತೋಟಗಾರಿಕಾ ಇಲಾಖೆ ಕಾರ್ಯದರ್ಶಿಯನ್ನು ಕರೆಸಿಕೊಂಡು ತಕ್ಷಣ ಆದೇಶ ನೀಡುವಂತೆ ತಾಕೀತು ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.