ಬೆಂಗಳೂರು: ‘ನೋಟಿಸ್ ಪಡೆದಿರುವ ವ್ಯಾಪಾರಿಗಳ ಅನುಕೂಲಕ್ಕಾಗಿ ಬಿಜೆಪಿಯಿಂದ ಸಹಾಯವಾಣಿ (88842 45123) ಆರಂಭಿಸಲಾಗುತ್ತದೆ. ಸೋಮವಾರದಿಂದ ಇದು ಕಾರ್ಯಾರಂಭ ಮಾಡಲಿದೆ. ವ್ಯಾಪಾರಿಗಳಿಗೆ ಅಗತ್ಯವಿರುವ ಮಾಹಿತಿ ನೀಡುತ್ತೇವೆ’ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಈ ನಡೆಯಿಂದ ಸಣ್ಣ ವ್ಯಾಪಾರಿಗಳಲ್ಲಿ ಗೊಂದಲ ಮತ್ತು ಆತಂಕ ಉಂಟಾಗಿದೆ. ಅದನ್ನು ಪರಿಹರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿಲ್ಲ ಎಂದು ದೂರಿದರು.
‘ಜಿಎಸ್‌ಟಿ ನೋಂದಣಿ, ಜಿಎಸ್‌ಟಿ ಪಾವತಿ ಬಗ್ಗೆ ಸಣ್ಣ ವ್ಯಾಪಾರಿಗಳಲ್ಲಿ ಅರಿವು ಮೂಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿಯೇ ಇಲ್ಲ. ಆದರೆ, ಈಗ ಏಕಾಏಕಿ ತೆರಿಗೆ ಪಾವತಿಸಿ ಎಂದು ನೋಟಿಸ್ ನೀಡಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.