ADVERTISEMENT

ದೇಶಕ್ಕೆ ಬಿಜೆಪಿ ದೊಡ್ಡ ಗಂಡಾಂತರ: ಶಾಸಕ ಕೃಷ್ಣಬೈರೇಗೌಡ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2021, 3:27 IST
Last Updated 30 ಸೆಪ್ಟೆಂಬರ್ 2021, 3:27 IST
ಗಾಂಧಿನಡಿಗೆ ಕಾರ್ಯಾಗಾರವನ್ನು ಎಂ.ವೀರಪ್ಪ ಮೊಯಿಲಿ ಉದ್ಘಾಟಿಸಿದರು. ಕೃಷ್ಣಬೈರೇಗೌಡ, ಸಲೀಂ ಅಹಮದ್, ಡಾ.ಎಲ್.ಹನುಮಂತಯ್ಯ, ರಾಜಕುಮಾರ್, ಗೋಪಾಲಕೃಷ್ಣ, ಕೇಶವ ರಾಜಣ್ಣ, ವೈ.ಆರ್.ಶ್ರೀಧರ್ ಇತರರು ಇದ್ದರು
ಗಾಂಧಿನಡಿಗೆ ಕಾರ್ಯಾಗಾರವನ್ನು ಎಂ.ವೀರಪ್ಪ ಮೊಯಿಲಿ ಉದ್ಘಾಟಿಸಿದರು. ಕೃಷ್ಣಬೈರೇಗೌಡ, ಸಲೀಂ ಅಹಮದ್, ಡಾ.ಎಲ್.ಹನುಮಂತಯ್ಯ, ರಾಜಕುಮಾರ್, ಗೋಪಾಲಕೃಷ್ಣ, ಕೇಶವ ರಾಜಣ್ಣ, ವೈ.ಆರ್.ಶ್ರೀಧರ್ ಇತರರು ಇದ್ದರು   

ಯಲಹಂಕ: ಪ್ರಸ್ತುತ ಭಾರತಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವ ಬಿಜೆಪಿಯನ್ನು ಬೇರುಸಮೇತ ಕಿತ್ತೊಗೆಯುವ ಮೂಲಕ ದೇಶವನ್ನು ದೊಡ್ಡ ಗಂಡಾಂತರದಿಂದ ಪಾರುಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಶಾಸಕ ಕೃಷ್ಣಬೈರೇಗೌಡ ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಯಲಹಂಕ ವಿಧಾನಸಭಾ ಕ್ಷೇತ್ರದ ವತಿಯಿಂದ ಸೋಲದೇವನಹಳ್ಳಿಯಲ್ಲಿ ಆಯೋಜಿಸಿದ್ದ ‘ಗಾಂಧಿ ನಡಿಗೆ’ ಕಾರ್ಯಾಗಾರದಲ್ಲಿ ಮಾತನಾಡಿ, ‘ಈ ದೇಶಕ್ಕೆ ಮಾರಕವಾಗಿರುವ ಬಿಜೆಪಿಯಿಂದ ದೇಶವನ್ನು ರಕ್ಷಿಸಿಕೊಳ್ಳಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೊಂದೇ ಪರಿಹಾರ’ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ರಾಮಲಿಂಗಾರೆಡ್ಡಿ ಮಾತನಾಡಿ, ‘ಸುಳ್ಳುಗಳನ್ನು ಹೇಳುವ ಮೂಲಕ ಬಿಜೆಪಿ ಅಧಿಕಾರ ಹಿಡಿಯಿತು. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಹೆಸರು ಹೇಳುವುದನ್ನು ಬಿಟ್ಟರೆ, ಅವರ ಉಳಿದ ಮಾತುಗಳೆಲ್ಲವೂ ಸುಳ್ಳೇ ಆಗಿರುತ್ತವೆ’ ಎಂದರು.

ADVERTISEMENT

ಕಾಂಗ್ರೆಸ್‌ ಮುಖಂಡ ಎಂ.ವೀರಪ್ಪ ಮೊಯಿಲಿ ಮಾತನಾಡಿ, ‘ರೈತರಿಗೆ ಮಾರಕವಾಗಿರುವ ಕೃಷಿ ಕಾಯಿದೆಗಳನ್ನು ರದ್ದುಗೊಳಿಸಬೇಕೆಂದು ದೆಹಲಿಯಲ್ಲಿ 10 ತಿಂಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಸುಮಾರು 250 ಮಂದಿ ಸತ್ತಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿಯವರು ಅವರನ್ನು ಕರೆಸಿ ಮಾತನಾಡದೆ ಅಥವಾ ಬೇಡಿಕೆಗಳಿಗೆ ಮನ್ನಣೆ ನೀಡದೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಇಡೀ ರೈತಸಮುದಾಯವನ್ನೇ ದೊಡ್ಡ ಕಂಪನಿಗಳಿಗೆ ಮಾರಾಟಮಾಡುವ ಹುನ್ನಾರ ನಡೆಸಿದ್ದಾರೆ’ ಎಂದು ಅವರು ದೂರಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌, ರಾಜ್ಯಸಭಾ ಸದಸ್ಯ ಎಲ್‌.ಹನುಮಂತಯ್ಯ, ವಿಧಾನಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಕಾಂಗ್ರೆಸ್ ಮುಖಂಡರಾದ ಗೋಪಾಲಕೃಷ್ಣ, ಕೇಶವ ರಾಜಣ್ಣ, ರಾಜಕುಮಾರ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.