ಬಿಜೆಪಿ ಜನಾಕ್ರೋಶ ಯಾತ್ರೆ
ಬೆಂಗಳೂರು: ಮೂರನೇ ಹಂತದ ಜನಾಕ್ರೋಶ ಯಾತ್ರೆಯನ್ನು ಎರಡು ದಿನ ಮುಂದೂಡಲಾಗಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ತಿಳಿಸಿದ್ದಾರೆ.
ಮೂರನೇ ಹಂತದ ಜನಾಕ್ರೋಶ ಯಾತ್ರೆಯು ಇದೇ 24ರಂದು (ಗುರುವಾರ) ಬಳ್ಳಾರಿ ಮತ್ತು ವಿಜಯನಗರ ಹಾಗೂ 25ರಂದು ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ನಿಗದಿಯಾಗಿತ್ತು. ಆದರೆ, ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕದ ಮೂವರು ಸೇರಿ ದೇಶದ ವಿವಿಧ ರಾಜ್ಯಗಳ 27 ನಾಗರಿಕರು ಹತ್ಯೆಯಾಗಿದ್ದಾರೆ. ಅವರಿಗೆ ಸಂತಾಪ ಸೂಚಿಸುವ ಕಾರಣ ಪಕ್ಷದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಜನಾಕ್ರೋಶ ಯಾತ್ರೆಯನ್ನು ಎರಡು ದಿನ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.