ಸಾಂದರ್ಭಿಕ ಚಿತ್ರ
ಬೆಂಗಳೂರು: ಜಾತ್ಯಾತೀತ ಮತದಾರರ ಹಿತಕ್ಕಿಂತ ಕುಟುಂಬದ ಹಿತವೇ ಮುಖ್ಯವಾಯಿತೆ ಎಂದು ಕಾಂಗ್ರೆಸ್, ಜೆಡಿಎಸ್ ವಿರುದ್ಧ ಪ್ರಶ್ನಿಸಿದೆ.
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಾಂಗ್ರೆಸ್, ಕೇವಲ ಕುಟುಂಬದ ಹಿತಾಸಕ್ತಿಗಾಗಿ ಜಾತ್ಯಾತೀತತೆಯನ್ನು ವಿಸರ್ಜಿಸಿರುವ ಜೆಡಿಎಸ್ ತನ್ನ ಅಲ್ಪಸಂಖ್ಯಾತ ಮತದಾರರಿಗೆ ಏನೆಂದು ಉತ್ತರಿಸುತ್ತದೆ?, ಬಿಜೆಪಿಯ ಅಲ್ಪಸಂಖ್ಯಾತ ಹಾಗೂ ದಲಿತ ವಿರೋಧಿ ನೀತಿಗಳಿಗೆ ಜೆಡಿಎಸ್‌ನ ಸಮ್ಮತಿಯೂ ಇದೆಯೇ?, ಹಿಂದೆ ಜೆಡಿಎಸ್ ಪಕ್ಷದಲ್ಲೇ ಇದ್ದ ಸಂಸದ ಡ್ಯಾನಿಷ್ ಅಲಿ ಅವರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತಾಡಿದ ಬಿಜೆಪಿ ಸಂಸದನ ಮಾತನ್ನು ಜೆಡಿಎಸ್ ಕೂಡ ಅನುಮೋದಿಸುತ್ತದೆಯೇ?, ಜಾತ್ಯಾತೀತ ಮತದಾರರ ಹಿತಕ್ಕಿಂತ ಕುಟುಂಬದ ಹಿತವೇ ಮುಖ್ಯವಾಯಿತೇ ಎಂದು ಕೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.