ADVERTISEMENT

ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ: ಕುಮಾರಸ್ವಾಮಿ ನಿಲುವು ತಿಳಿಸಲಿ ಎಂದ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2021, 7:26 IST
Last Updated 6 ಡಿಸೆಂಬರ್ 2021, 7:26 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಎಚ್.ಡಿ.ಕುಮಾರಸ್ವಾಮಿ ಅವರು ನಿಲುವನ್ನು ತಿಳಿಸಲಿಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ, ಸದ್ಯ ಪರಿಷತ್ ಚುನಾವಣೆ ಹಾಗೂ ಅಧಿವೇಶನ ನಮ್ಮ ಆದ್ಯತೆಯಾಗಿದೆ. ಮುಂದೆ ವರಿಷ್ಠರ ಸೂಚನೆ ಮೇರೆಗೆ ಸಂಪುಟ ವಿಸ್ತರಣೆ ಕುರಿತು ತೀರ್ಮಾನಿಸಲಾಗುವುದು‌ ಎಂದು ಪ್ರತಿಕ್ರಿಯಿಸಿದರು.

ADVERTISEMENT

ಒಮೈಕ್ರಾನ್ ಮತ್ತು ಡೆಲ್ಟಾ ಪ್ಲಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬರುತ್ತಿರುವ ಸಲಹೆಗಳನ್ನು ತಜ್ಞರ ಸಮಿತಿ ಪರಿಶೀಲಿಸಲಿದೆ. ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.